ಕಲ್ಪ ಮೀಡಿಯಾ ಹೌಸ್
ನವದೆಹಲಿ: ಒಂದೆಡೆ ಕೊರೋನಾ ಸೋಂಕು ಇಳಿಕೆಯಾಗುತ್ತಿದ್ದರೂ, ಮೂರನೆಯ ಅಲೆಯ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 31ರವರೆಗೂ ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಡಿಜಿಸಿಎ ನಿರ್ಬಂಧಿಸಿದೆ.
ಈ ಕುರಿತಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದು, ಭಾರತದಿಂದ ಹೊರಡುವ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲಿನ ನಿರ್ಬಂಧಗಳನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದ್ದು, ದೇಶಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ವಿಮಾನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದಿದ್ದಾರೆ.
ಸರಕು ಸಾಗಾಟ ವಿಮಾನ ಹಾಗೂ ಆಯ್ದ ದೇಶಗಳೊಂದಿಗಿನ ದ್ವಿಪಕ್ಷೀಯ ಒಪ್ಪಂದದ ಅಡಿಯಲ್ಲಿ ವಿಮಾನ ಸಂಚಾರ ಎಂದಿನಂತೆ ಮುಂದುವರಿಯಲಿದೆ ಎಂದು ಉಲ್ಲೇಖಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















