ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅವಾಸ್ತವಿಕ ಚುನಾವಣಾ ಭರವಸೆಗಳನ್ನು ನೀಡಿ, ಅದಕ್ಕಾಗಿ ಸರ್ಕಾರದ ಖಜಾನೆಯನ್ನು ಖಾಲಿ ಮಾಡುವ ಯಾವುದೇ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನದ ಸಹಾಯ ಮಾಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ #AmitShah ಖಡಕ್ ವಾರ್ನಿಂಗ್ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಅವಾಸ್ತವಿಕ ಚುನಾವಣಾ ಭರವಸೆಗಳನ್ನು #ElectionPromise ನೀಡಿ ಖಜಾನೆ ಖಾಲಿ ಮಾಡುವ ರಾಜ್ಯಗಳಿಗೆ ಕೇಂದ್ರವು ಸಹಾಯ ಮಾಡುವುದಿಲ್ಲ ಎಂದಿದ್ದಾರೆ.
ಎಲ್ಲಾ ರಾಜ್ಯಗಳು ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಸಮಾಜ ಕಲ್ಯಾಣ ಬದ್ಧತೆಗಳನ್ನು ಗಣನೆಗೆ ತೆಗೆದುಕೊಂಡು ಬಜೆಟ್ #Budget ಅನ್ನು ಸಿದ್ಧಪಡಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ನೀವು ಖಜಾನೆ ಖಾಲಿ ಮಾಡುವ ಇಂತಹ ಚುನಾವಣಾ ಭರವಸೆಗಳನ್ನು ನೀಡುತ್ತೀರಿ ಮತ್ತು ನಂತರ ಸಂಬಳ ನೀಡಲು ನಿಮ್ಮ ಬಳಿ ಹಣವಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಭಾರತ ಸರ್ಕಾರವು ಸಹಾಯ ಮಾಡಲು ಸಾಧ್ಯವಿಲ್ಲ. ನೀವುಗಳೇ ನಿಭಾಯಿಸಿಕೊಳ್ಳಬೇಕು ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post