Read - < 1 minute
ನವದೆಹಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ಹಾಗೂ ನಿವೃತ್ತ ನೌಕರರಿಗೆ ಬಂಪರ್ ಘೋಷಣೆ ಮಾಡಿದ್ದು, ಶೇ.3ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ.
ಇಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಇದಕ್ಕೆ ಅನುಮೋದನೆ ಪಡೆಯಲಾಗಿದೆ. ಈ ಲಾಭ ಕೇಂದ್ರ ಸರ್ಕಾರಿ ನೌಕರರಿಗೆ ಹಾಗೂ ನಿವೃತ್ತ ನೌಕರರಿಗೆ 2019ರ ಜನವರಿ ೧ರಿಂದ ಪೂರ್ವಾನ್ವಯವಾಗಲಿದೆ.
ಕೇಂದ್ರ ಸರ್ಕಾರದ ಈ ನಿರ್ಧಾರದಿಂದಾಗಿ ಸುಮಾರು 1.1 ಕೋಟಿ ಉದ್ಯೋಗಿ ಹಾಗೂ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ.
Discussion about this post