ಚಳ್ಳಕೆರೆ: ನಗರದ ಬೆಂಗಳೂರು ರಸ್ತೆಯಲ್ಲಿರುವ ವೀರಶೈವ ಕಲ್ಯಾಣ ಮಂಟಪದ ಬಳಿ ಇಂದು ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂದು ರಾತ್ರಿ ಸುಮಾರು 9 ಗಂಟೆಗೆ, ಬೆಂಗಳೂರು ಕಡೆಯಿಂದ ಬಳ್ಳಾರಿ ಕಡೆಗೆ ಚಲಿಸುತ್ತಿದ್ದ ಲಾರಿ ವಾಹನ ದಟ್ಟಣೆ ಇದ್ದ ಕಾರಣ ನಿಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ ಹಿಂದಿನಿಂದ ವೇಗವಾಗಿ ಬಂದ ಬಂದ ಟಾಟಾ ಏಸ್ ವಾಹನವು ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದು, ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿವೆ.
ಮೃತರನ್ನು ಚಳ್ಳಕೆರೆ ಗಾಂಧೀನಗರ ನಿವಾಸಿ ತಿಪ್ಪೇಸ್ವಾಮಿ(27), ಮಲ್ಲಿಕಾರ್ಜುನ್(25) ಎಂದು ಗುರುತಿಸಲಾಗಿದೆ. ಗಂಭೀರ ಗಾಯಗಳಾದ ನಾಲ್ವರನ್ನು ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)







Discussion about this post