ಚಳ್ಳಕೆರೆ: ಇಲ್ಲಿನ ಗಾಂಧಿನಗರ ನಿವಾಸಿ ಸ್ವಾಮಿ(45) ಎನ್ನುವವರು ಚರಂಡಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.
ಮೃತ ವ್ಯಕ್ತಿ ಮದ್ಯಪಾನ ಮಾಡಿ ನಡೆದು ಹೋಗುವಾಗ ನಗರದ ಕಿಗ್ ಪೆಗ್ ಶಾಪ್ ಬಳಿ ಆಯತಪ್ಪಿ ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

















