ಚಳ್ಳಕೆರೆ: ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೋರ್ವರು ದುರಂತ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ.
ಓಬಣ್ಣ(42) ಎಂಬುವವರೇ ಮೃತ ದುರ್ದೈವಿಯಾಗಿದ್ದು, ಪಟ್ಟಣದ ಗಾಂಧಿನಗರದ ಮಾರಮ್ಮ ದೇವಸ್ಥಾನದ ಹಿಂಭಾಗದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ.
ಮೃತ ವ್ಯಕ್ತಿ ಹೂವಿನ ವ್ಯಾಪಾರಿಯಾಗಿದ್ದು, ಮನೆಯಲ್ಲಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದರು. ತತಕ್ಷಣವೇ ಇವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಯಿತಾದರೂ ಫಲಕಾರಿಯಾಗದೇ ಆತ ಮೃತಪಟ್ಟಿದ್ದಾನೆ.
ಪಿ.ಎಸ್.ಐಎಸ್.ಡಿ. ನೂರ್ ಅಹ್ಮದ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get In Touch With Us info@kalpa.news Whatsapp: 9481252093, 94487 22200
















