ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ನಗರದ ಗಾಂಧಿನಗರದ ೨೨ನೆಯ ವಾರ್ಡ್‌ನ ಸೈಯಾದ್ ಕಜೀರ್ ಎನ್ನುವವರ ಮನೆಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಗೃಹೋಪಯೋಗಿ ವಸ್ತುಗಳು ಸುಟ್ಟು ಹೋಗಿರುವ ಘಟನೆ ನಡೆದಿದೆ.

ಗ್ಯಾಸ್ ಸಿಲಿಂಡರ್ ಲೀಕಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಮನೆಯಲ್ಲಿದ್ದ ಟಿವಿ, ಪ್ರೀಜ್, ಬೀರು ಬೆಂಕಿಗೆ ಆಹುತಿಯಾಗಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ. ಹಾಗೂ ಸಮಯಕ್ಕೆ ಸರಿಯಾಗಿ ಅಗ್ನಿಶಾಮಕ ದಳ ಸ್ಥಳಕ್ಕೆ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ.

ಘಟನ ಸ್ಥಳಕ್ಕೆ ನಗರ ಸಭೆ ಅಧ್ಯಕ್ಷೆ ಕವಿತ ನಾಯಕಿ ಹಾಗೂ ಕಸಬ ಕಂದಾಯ ಅಧಿಕಾರಿ ರಾಜೇಶ ಬೇಡಿ ಬೇಟಿ ನೀಡಿ ಪರೀಶೀಲಿಸಿದ್ದಾರೆ.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















