ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಅಂಬಿಗರ ಚೌಡಯ್ಯ 12ನೇ ಶತಮಾನದ ಬಸವಣ್ಣನವರ ಅನುಯಾಯಿ ಶರಣ. ಸಾವಿರಾರು ವರ್ಷಗಳಿಂದ ಧರ್ಮ-ದೇವರುಗಳ ಬಗೆಗೆ ಜನ ಸಮೂಹದಲ್ಲಿದ್ದ ಮೂಢನಂಬಿಕೆಗಳನ್ನೆಲ್ಲ ಗುರು ಬಸವಣ್ಣನವರೊಂದಿಗೆ ಅಂಬಿಗರ ಚೌಡಯ್ಯ ಹೊಡೆದೋಡಿಸುತ್ತಲೇ ವಿಚಾರ ಪರವಾದ ವಾಸ್ತವವಾದ ಅಂಶಗಳನ್ನು ಜನಮನದಲ್ಲಿ ಮೂಡಿಸಿದರು ಎಂದು ಸಮಾಜದ ಶಿವಾನಂದ ಹೇಳಿದರು.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಆಡಳಿತ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ನಿಜಶರಣ ಅಂಬಿಗರ ಚೌಡಯ್ಯ ಕಾರ್ಯಕ್ರಮದಲ್ಲಿ ಅಂಬಿಗರ ಚೌಡಯ್ಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಧರ್ಮ-ದೇವರು ಕೇವಲ ಶ್ರೀಮಂತರ ಸೋತ್ತಾಗಿದ್ದ ಅಂದಿನ ಸಂದರ್ಭದಲ್ಲಿ ಪೂಜೆ-ಮೋಕ್ಷ ಕೇವಲ ನೇಮವಂತರ, ಬ್ರಾಹ್ಮಣರ ಗುತ್ತಿಗೆಯಾಗಿದ್ದ ಸಮಯದಲ್ಲಿ ಭಾಷ್ಯಕಾರರು ಹೇಳಿದ್ದೇ ಸರಿಯೆನ್ನುವ ವ್ಯವಸ್ಥೆಯಲ್ಲಿ ಚೌಡಯ್ಯ ಈ ಮೂವರನ್ನು ಕ್ರೂರ ಕರ್ಮಿಗಳೆಂದು, ಸಂದೇಹಿಗಳೆಂದು ಕಟುವಾಗಿ ಟೀಕಿಸುವುದರ ಮೂಲಕ ಇವರು ಹೋದ ದಾರಿಯಲ್ಲಿ ಯಾರೂ ಹೋಗ ಬಾರದೆಂದು ಸ್ಪಷ್ಟಪಡಿಸುತ್ತಾನೆ. ಇವರ ವಚನಗಳು ತುಂಬಾ ಖಾರವಾಗಿರುವುದು ಅವರ ಆತ್ಮ ಬಲವನ್ನು ಹಾಗೂ ಸತ್ಯವನ್ನು ಪ್ರತಿಪಾದಿಸುವಲ್ಲಿ ಹೊಂದಿದ್ದ ಧೈರ್ಯವನ್ನು ತೋರಿಸುತ್ತವೆ ಎಂದು ಅಭಿಪ್ರಾಯಪಟ್ಟರು.
12ನೆಯ ಶತಮಾನದಲ್ಲಿ ಕಲ್ಯಾಣದ ಶಿವಶರಣರ ಮಧ್ಯದಲ್ಲಿ ಪ್ರಜ್ವಲವಾಗಿ ಬೆಳಗಿದ ಶರಣನೆಂದರೆ ಅಂಬಿಗರ ಚೌಡಯ್ಯ. ಮಾತು ಕಟುವಾದರೂ ದಿಟವನ್ನೆ ನುಡಿದ ದಿಟ್ಟನೀತ. ನುಡಿದಂತೆ ನಡೆದವನು, ನಡೆದಂತೆ ನುಡಿದವನು ಅಂಬಿಗರ ಚೌಡಯ್ಯ. ನಿಜಾರ್ಥದಲ್ಲಿ ಒಬ್ಬ ಬಂಡುಕೋರ, ಕ್ರಾಂತಿಕಾರಿ ಶರಣ, ನಿಷ್ಟೂರ ಮನುಷ್ಯ. ಎಲ್ಲಾ ಶರಣರಂತೆ ಈತ ಕಾಯಕಯೋಗಿ ಎಂದು ಹೇಳಿದರು.
ನಗರಸಭೆ ಮಾಜಿ ಸದಸ್ಯ ಹಾಗೂ ವಿಶ್ವಕರ್ಮ ರಾಜ್ಯಾಧ್ಯಕ್ಷ ಆರ್. ಪ್ರಸನ್ನ ಕುಮಾರ್ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಕ್ಕ, ಉಪಾಧ್ಯಕ್ಷರಾದ ಮಂಜುಳಾ ಆರ್. ಪ್ರಸನ್ನ ಕುಮಾರ್, ನಗರಸಭೆ ಮಾಜಿ ಉಪಾಧ್ಯಕ್ಷ ಜೈ ತುಂಬಿ, ನಗರಸಭೆ ಸದಸ್ಯರಾದ ವೈ ಪ್ರಕಾಶ್, ವೀರಭದ್ರಯ್ಯ ಹಾಗೂ ಪೌರಾಯುಕ್ತರಾದ ಟಿ ಲೀಲಾವತಿ, ತಾಲೂಕು ಮಟ್ಟದ ಅಧಿಕಾರಿಗಳು, ಶಿರಸ್ತೇದಾರ್, ತಾಲೂಕು ಕಚೇರಿ ಅಧಿಕಾರಿಗಳು ಲಿಂಗೇಗೌಡ ಶ್ರೀನಿವಾಸ್ ಸಮುದಾಯದ ಮುಖಂಡರಾದ ಮಾರುತಿ, ತಿಪ್ಪೇರುದ್ರಯ್ಯ, ನಾಗರಾಜಣ್ಣ, ಮಹೇಶ್, ಹನುಮಂತಪ್ಪ, ಆನಂದ್ ಇನ್ನಿತರರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post