ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಬೈಕಿಗೆ ಅಡ್ಡ ಬಂದ ಬೀದಿ ನಾಯಿಯನ್ನು ತಪ್ಪಿಸುವ ಯತ್ನದಲ್ಲಿ ಉಂಟಾದ ಅಪಘಾತದಲ್ಲಿ ಎಎಸ್’ಐ ಒಬ್ಬರು ಪ್ರಾಣಬಿಟ್ಟಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಕ್ರಾಸ್ ಬಳಿಯಲ್ಲಿ ನಡೆದಿದೆ.
ಪರಶರಾಂಪುರ ಪೊಲೀಸ್ ಠಾಣೆಯ ಎಎಸ್’ಐ ಮಂಜುನಾಥ್ (50) ಮೃತ ದುರ್ದೈವಿ.
ಐಮಂಗಲ ಪೊಲೀಸ್ ತರಬೇತಿ ಶಾಲೆಯಿಂದ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ.
ಬೈಕ್’ನಲ್ಲಿದ್ದ ಮತ್ತೋರ್ವ ಪೊಲೀಸ್ ಪೇದೆ ಸೂರ್ಯಪ್ರಭಾಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















