ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ನಗರದ ಹೊರವಲಯದ ಸೋಮುಗುದ್ದು ರಸ್ತೆಯ ಸಾರ್ವಜನಿಕ ಸ್ಥಳದಲ್ಲಿ ಗುಂಪು ಕಟ್ಟಿಕೊಂಡು ಇಸ್ಪೀಟು ದಂಧೆಯಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಜಿಲ್ಲಾ ಎಸ್‌ಪಿ ರಾಧಿಕಾ ನೇತೃತ್ವದಲ್ಲಿ ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.
ಸುನಿಲ್ ಹಾಗೂ ಇತರೆ ನಾಲ್ಕು ಜನರನ್ನು ಬಂಧಿಸಿ ಅವರಿಂದ ಆರು ಸಾವಿರ ಹಣ ವಶಕ್ಕೆ ಪಡೆಯಲಾಗಿದ್ದು, ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದಾಳಿವೇಳೆ ಡಿವೈಎಸ್‌ಪಿ ಕೆ.ವಿ. ಶ್ರೀಧರ್, ಪಿಎಸ್‌ಐ ಮಹೇಶಗೌಡ, ಪೋಲೀಸ್ ಪೇದೆಗಳಾದ ಏಕಾಂತ ರೆಡ್ಡಿ, ವೆಂಕಟೇಶ, ಮಹತೇಂಶ ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post