ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಕೆಲ ಪಕ್ಷದ ಹೆಸರು ಹೇಳಿಕೊಂಡು ಸರಕಾರಿ ಕಚೇರಿಯಲ್ಲಿ ಲೈವ್ ಮಾಡುತ್ತಾ ಸರಕಾರದ ಅಧೀನ ಅಧಿಕಾರಿಗಳಿಗೆ ಧಕ್ಕೆ ಉಂಟುಮಾಡುವ ಇವರುಗಳನ್ನು ಸಾರ್ವಜನಿಕವಾಗಿ ಪ್ರಶ್ನೆಮಾಡಿದ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಕೆಲ ಮುಖಂಡರು ಪಕ್ಷದ ಹೆಸರು ಹೇಳಿಕೊಂಡು ತಾಲೂಕು ಕಛೇರಿಯಲ್ಲಿ ಹಾಗೂ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಇಂತಹವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಪತ್ರಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಪತ್ರಕರ್ತ ಟಿ.ಜೆ. ತಿಪ್ಪೇಸ್ವಾಮಿ ಮಾತನಾಡಿ, ಸಾರ್ವಜನಿಕರೊಂದಿಗೆ ಕಾರ್ಯನಿರತವಾಗಿ ಸೇವೆ ಮಾಡುವ ಪತ್ರಕರ್ತರ ಮೇಲೆ ಹಲ್ಲೆ ಮಾಡುವುದು ಖಂಡನೀಯ. ಹಾಗೂ ಸರ್ಕಾರದ ಅಧಿಕಾರಿಗಳನ್ನು ಲೈವ್ ಮಾಡಿ ಅವರ ಖಾಸಗಿ ಜೀವನಕ್ಕೆ ಧಕ್ಕೆ ಉಂಟು ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Also read: ಹವಾಮಾನ ವೈಪರೀತ್ಯ ತಡೆಯಲು ಹೆಚ್ಚುಹೆಚ್ಚು ಗಿಡ ನೆಟ್ಟು ಪೋಷಿಸಿ: ಡಾ. ಲತಾ ನಾಗೇಂದ್ರ ಕರೆ
ಮನವಿ ಸ್ವೀಕರಿಸಿದ ತಹಶೀಲ್ದಾರ್ ಎನ್. ರಘುಮೂರ್ತಿ ಮಾತನಾಡಿ, ಸಮಾಜದ ಸ್ವಾಥ್ಯ ಕಾಪಾಡುವ ನಿಟ್ಟಿನಲ್ಲಿ ಸಮಾಜದ ಸೇವೆ ಮಾಡುವ ಸರಕಾರದ ಅಧಿಕಾರಿಗಳ ಹಾಗೂ ಪತ್ರಕರ್ತರ ಮೇಲೆ ಈ ರೀತಿಯ ಘಟನೆಗಳು ಜರುಗದಂತೆ ಈ ಕೂಡಲೇ ಜಿಲ್ಲಾಧಿಕಾರಿಗಳಿಗೂ ಹಾಗೂ ಜಿಲ್ಲಾ ವರಿಷ್ಠಾಧಿಕಾರಿಗಳಿಗೆ ಪತ್ರ ರವಾನಿಸಿ ಶಿಸ್ತು ಕ್ರಮ ಕೈಗೊಳ್ಳಲು ಶಿಪರಾಸ್ಸು ಮಾಡಲಾಗುವುದು ಎಂದು ಭರವಸೆ ನೀಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post