ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ತಳಕು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್, ಡೀಸಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ತಳಕು ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಈ ವೇಳೆ ಮೊಳಕಾಲ್ಮುರು ಕಾಂಗ್ರೆಸ್ ಮುಖಂಡ ಡಾ. ಬಿ. ಯೋಗೇಶ್ ಬಾಬು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್, ಡೀಸಲ್ ಹಾಗೂ ಗ್ಯಾಸ್ ಬೆಲೆ ಏರಿಕೆ ಮಾಡಿ ಸಾರ್ವಜನಿಕರನನ್ನು ಆರ್ಥಿಕ ಸಂಕಷ್ಟಕ್ಕೆ ದೂಡುತ್ತಿದೆ. ಮೊದಲೇ ಕೊರೋನಾ ಸಂಕಷ್ಟಕ್ಕೆ ಸಿಲುಕಿರುವ ಜನರು ಜೀವನ ನಡೆಸಲಾಗದೇ ಸಂಕಷ್ಟಕ್ಕೆ ಸಿಲಿಕಿದ್ದಾರೆ. ಇಂತಹ ಸಮಯದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆ ದಿನೇ ದಿನೇ ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆಯುವಂತ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಈ ವೇಳೆ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಶಶಾಂಕ್, ಯುವ ಕಾಂಗ್ರೆಸ್ ಸಮಿತಿಯ ಹರೀಶ್, ಉಪಾಧ್ಯಕ್ಷ ರವಿಚಂದ್ರನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ರೆಡ್ಡಿ, ಕಾಂಗ್ರಸ್ ಮುಖಂಡರಾದ ಯಾದಲಗಟ್ಟೆ ಪಾಲಯ್ಯ, ಕೆ.ಪಿ.ಸಿ. ಸಿ. ಸಾಮಾಜಿಕ ಜಾಲತಾಣ ಪ್ರಧಾನ ಕಾರ್ಯದರ್ಶಿ ಮಂಜು ಜವಳಿ, ಒಬಿಸಿ ಬ್ಲಾಕ್ ಅಧ್ಯಕ್ಷ ತಿಪ್ಪೇಸ್ವಾಮಿ, ಸಾಮಾಜಿಕ ಜಾಲತಾಣ ಅಧ್ಯಕ್ಷ ಮಧು, ಕೃಷ್ಣಮೂರ್ತಿ, ತಿಪ್ಪೇಶ್ ದೊರೆ ಸೇರಿದಂತೆ ಕಾರ್ಯಕರ್ತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post