ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಕ್ರೀಡೆಗಳಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಹಿರಿಯೂರು, ಮೊಳಕಾಲ್ಮೂರು ಹಾಗೂ ಚಳ್ಳಕೆರೆ ಬೆಸ್ಕಾಂ ನೌಕರರು ಆಯೋಜಿದ್ದ ಪವರ್‌ಮ್ಯಾನ್ ಕಪ್ ಕ್ರಿಕೆಟ್ ಟೂರ್ನಮೆಂಟ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇಲಾಖೆಯ ಕಾರ್ಯ ಒತ್ತಡದ ನಡುವೆಯೂ ಕ್ರೀಡಾ ಆಸಕ್ತಿಯನ್ನು ನೌಕರರು ತಪ್ಪದೇ ಬೆಳೆಸಿಕೊಳ್ಳಬೇಕು ಎಂದು ಬೆಸ್ಕಾಂ ನೌಕರರಿಗೆ ಸಲಹೆ ನೀಡಿದರು.
ನಗರಸಭೆ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್‌ಗೌಡ, ಬೆಸ್ಕಾಂ ಸಹಾಯಕ ಎಂಜಿನಿಯರ್ ತಿಮ್ಮರಾಜು, ದೇವರಾಜ, ಎಪಿಎಂಸಿ ಮಾಜಿ ಸದಸ್ಯ ದೊಡ್ಡರಂಗಪ್ಪ, ಕಾಂಗ್ರೆಸ್ ಆರ್.ಪ್ರಸನ್ನಕುಮಾರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post