ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ದೇವಾಲಯಗಳು ಧಾರ್ಮಿಕ ಮತ್ತು ಅಧ್ಯಾತ್ಮಿಕ ಚಟುವಟಿಕೆಗಳ ಕೇಂದ್ರವಾಗಿದ್ದು, ಶ್ರದ್ಧೆ ಮತ್ತು ಭಕ್ತಿಯಿಂದ ನಡೆದುಕೊಳ್ಳುವ ಸ್ಥಳ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ತಾಲೂಕಿನ ದೇವರಮರಿಕುಂಟೆ ಗ್ರಾಮದ ಎಸ್‌ಸಿ ಕಾಲೋನಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಚಳ್ಳಕೆರಮ್ಮ ದೇವಸ್ಥಾನ ಉದ್ಘಾಟನೆ ಮತ್ತು ಕಳಸ ಪ್ರತಿಷ್ಟಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ನಮ್ಮ ಹಿರಿಯರು ಹಾಕಿಕೊಟ್ಟ ಬುನಾದಿಯಂತೆ ದೇವರು ದೇವಾಲಯದಲ್ಲಿ ನೆಲೆಸಿರುತ್ತಾರೆ ಎಂಬ ನಂಬಿಕೆಯಿಂದ ದೇವಸ್ಥಾನಗಳನ್ನು ನಿರ್ಮಿಸಿ ಶ್ರದ್ಧೆ ಮತ್ತು ಭಕ್ತಿಯಿಂದ ಆಧ್ಯಾತ್ಮಿಕ ಕಾರ್ಯಗಳನ್ನು ನಡೆಸಲಾಗುತ್ತದೆ. ಪೂಜೆ, ದೇವರ ಸ್ಮರಣೆ ಮಾಡುವುದರ ಮೂಲಕ ಧಾರ್ಮಿಕ ಸಂಪ್ರದಾಯಗಳನ್ನು ಮುಂದುವರೆಸಿಕೊಂಡು ಬರಲಾಗಿದೆ ಎಂದರು.
ಈಗಾಗಲೇ ತಾಲೂಕಿನಲ್ಲಿ ಎಲ್ಲಾ ಸಮುದಾಯಕ್ಕೂ ಭವನ ನಿರ್ಮಿಸಲಾಗಿದೆ. ಈ ಗ್ರಾಮದಲ್ಲಿ ದೇವಸ್ಥಾನ ನಿರ್ಮಾಣಕ್ಕೆ ಅನುದಾನ ನೀಡಲಾಗಿದ್ದು, ಗ್ರಾಮಸ್ಥರ ಆಶಯದಂತೆ ಮುಂದಿನ ದಿನಗಳಲ್ಲಿ ಸಮುದಾಯ ಭವನ ನಿರ್ಮಿಸಲು ಸಹಕಾರ ಮಾಡುವುದಾಗಿ ಅವರು ಭರವಸೆ ನೀಡಿದರು.
ಜಿಪಂ ಸದಸ್ಯ ಬಿ.ಪಿ. ಪ್ರಕಾಶ ಮೂರ್ತಿ ಮಾತನಾಡಿ, ಒಂದು ದೇವಸ್ಥಾನ ಕಟ್ಟುವ ಬದಲು ಶಾಲೆ ನಿರ್ಮಿಸುವುದರಿಂದ ಸಾವಿರಾರು ಮಕ್ಕಳು ವಿದ್ಯಾವಂತರಾಗುತ್ತಾರೆ. ಧಾರ್ಮಿಕ ಕಾರ್ಯಗಳನ್ನು ನಡೆಸುವ ಉದ್ದೇಶದಿಂದ ದೇವಸ್ಥಾನಗಳನ್ನು ನಿರ್ಮಾಣ ಮಾಡಲಾಗುತ್ತದೆ. ಆದರೆ ಯಾವ ದೇವರು ಸಹ ವಿದ್ಯೆ, ಕೆಲಸ, ಮಂತ್ರಿ ಗಿರಿ, ಅಧಿಕಾರವನ್ನು ಕೊಡುವುದಿಲ್ಲ. ಆದರೆ, ಸಂವಿಧಾನ ನಮಗೆ ಎಲ್ಲವನ್ನು ಕೊಟ್ಡಿದೆ ಎಂದು ಅಭಿಪ್ರಾಯಪಟ್ಟರು.
ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಸಮರ್ಥರಾಯ, ಮಹೇಶ, ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಸುರೇಶಬಾಬು, ಜಿಪಂ ಮಾಜಿ ಅಧ್ಯಕ್ಷ ರವಿಕುಮಾರ್, ತಾಲೂಕು ಪಂಚಾಯಿತಿ ಸದಸ್ಯೆ ರಂಜಿತಾ, ನಗರಸಭೆ ಸದಸ್ಯ ವೀರಭದ್ರಯ್ಯ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶಗೌಡ, ಸಾಹಿತಿ ಮರಿಕುಂಟೆ ತಿಪ್ಪಣ್ಣ, ಗ್ರಾಪಂ ಅಧ್ಯಕ್ಷ ರಾಜಣ್ಣ, ಉಪಾಧಕ್ಷೆ ಮಂಜಮ್ಮ ಮತ್ತು ಗ್ರಾಮ ಪಂಚಾಯತಿ ಸದಸ್ಯರು, ಮುಖಂಡರು ಸಾರ್ವಜನಿಕರ ಉಪಸ್ಥಿತರಿದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post