ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಗ್ರಾಮದ ಸರ್ವಿಸ್ ರಸ್ತೆಯ ಮೂಲಕ ಬಸ್ ಬಾರದಿರುವ ಹಿನ್ನೆಲೆಯಲ್ಲಿ ತೊಂದರೆಗೀಡಾಗುತ್ತಿದ್ದ ವಿದ್ಯಾರ್ಥಿಗಳ ಅಹವಾಲಿಗೆ ಮುಖ್ಯಮಂತ್ರಿಗಳ ಕಚೇರಿ #CM Office ಸ್ಪಂದಿಸಿ, ಪರಿಹಾರ ಮಾಡಲಾಗಿದೆ.
ಸಾಣಿಕೆರೆ ಗ್ರಾಮದಲ್ಲಿ ಸಾರಿಗೆ ಬಸ್ ನಿಲುಗಡೆಗೆ #Government Bus ಅನುಮತಿ ಇದ್ದರೂ ಸಹ ಪ್ರತಿನಿತ್ಯ ಬಸ್ ನಿಲುಗಡೆ ನೀಡುತ್ತಿರಲಿಲ್ಲ. ಇದರಿಂದ ಸರ್ವಿಸ್ ರಸ್ತೆ ಮೂಲಕ ಗ್ರಾಮಕ್ಕೆ ಬಸ್ ಬಾರದಿರುವುದರಿಂದ ವಿದ್ಯಾರ್ಥಿಗಳಿಗೆ #Students ಕಾಲೇಜುಗಳಿಗೆ ಹೋಗಲು ತೊಂದರೆಯಾಗುತ್ತಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
Also read: ಸಾಯಲೆಂದು ಅಡ್ಡಪಟ್ಟಿಗೆ ನೇಣು | ಭಾರ ತಡೆಯದೇ ಹಗ್ಗ ತುಂಡಾಗಿ ಕೆಳಕ್ಕೆ ಬಿದ್ದ ವ್ಯಕ್ತಿ ಸಾವು
ಈಗಾಗಲೇ ಚಳ್ಳಕೆರೆ ಘಟಕದಿಂದ ಕಾರ್ಯಾಚರಣೆಯಾಗುವ ಎಲ್ಲಾ ವೇಗದೂತ ಸಾರಿಗೆಗಳು ಸಾಣಿಕೆರೆ ಗ್ರಾಮದಲ್ಲಿ ಸಂಚರಿಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನುಕೂಲವಾಗುತ್ತಿದೆ. ಇತರೆ ನಿಗಮದ ಎಲ್ಲಾ ವೇಗದೂತ ಸಾರಿಗೆಗಳನ್ನು ಸಾಣಿಕೆರೆ ಗ್ರಾಮದ ಸೇವಾ ರಸ್ತೆಯಲ್ಲಿ ಕಾರ್ಯಾಚರಣೆ ಮಾಡುವಂತೆ ಚಾಲನಾ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಚಿತ್ರದುರ್ಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ನೀವು ಸ್ಥಳೀಯವಾಗಿ ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳ ಎಕ್ಸ್ ಖಾತೆಗೆ ಟ್ಯಾಗ್ ಮಾಡಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post