ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ವ್ಯಾಕ್ಸಿನ್ ಹಾಕಿಸಿಕೊಳ್ಳಲು ನಿರಾಕರಿಸುತ್ತಿದ್ದವರಿಗೆ ಹೂ ಮಾಲೆ ಹಾಕಿ ಜಾಗೃತಿ ಮೂಡಿಸಿ ತಹಶೀಲ್ದಾರ್ ಎನ್. ರಘುಮೂರ್ತಿ ವ್ಯಾಕ್ಸಿನ್ ಹಾಕಿಸಿದರು.

ತಾಲೂಕನ್ನು ಸಂಪೂರ್ಣ ಕೋವಿಡ್ ವ್ಯಾಕ್ಸಿನ್ ಮುಕ್ತ ಮಾಡುವ ಉದ್ದೇಶದಿಂದ ಪ್ರತಿದಿನ ಗ್ರಾಮೀಣ ಭಾಗಗಳಲ್ಲಿ ವ್ಯಾಕ್ಸಿನ್ ಜಾಗೃತಿ ಜತೆಗೆ ವ್ಯಾಕ್ಸಿನ್ ಹಾಕಿಸಿಕೊಳ್ಳದ ವ್ಯಕ್ತಿಗಳಿಗೆ ಬಲವಂತೆ ಮಾಡದೆ ತಿಳುವಳಿಕೆ ಹೇಳಿ ವ್ಯಾಕ್ಸಿನ್ ಹಾಕಿಸಲಾಗುತ್ತಿದೆ.

ಗುರುವಾರ ಬೆಳಗ್ಗೆ ತಾಲ್ಲೂಕಿನ ನಾಯಕನಹಟ್ಟಿ ಹೋಬಳಿಯ ಗಜ್ಜಿಗನಾಹಳ್ಳಿ ಗ್ರಾಮದಲ್ಲಿ ಆರೋಗ್ಯ ಇಲಾಖೆ, ತಾಲ್ಲೂಕು ಆಡಳಿತ ಹಾಗೂ ಗ್ರಾಮಪಂಚಾಯಿತಿ ಇವರ ವತಿಯಿಂದ ವ್ಯಾಕ್ಸಿನ್ ಜಾಗೃತಿ ಹಮ್ಮಿಕೊಳ್ಳಲಾಗಿತ್ತು.

ಈ ಸಮಯದಲ್ಲಿ ನನಗೆ ವ್ಯಾಕ್ಸಿನ್ ಬೇಡ ಎನ್ನುವವರಿಗೆ ತಹಶೀಲ್ದಾರ್ ಎನ್. ರಘುಮೂರ್ತಿ ಹೂ ಮಾಲೆ ಹಾಕಿ ವ್ಯಾಕ್ಸಿನ್ ಹಾಕಿಸಿದ್ದಾರೆ. ಆರೊಗ್ಯ ಶಿಕ್ಷಣಾಧಿಕಾರಿ ಕುಂದಾಪುರ ತಿಪ್ಪೇಸ್ವಾಮಿ, ಗ್ರಾಮಪಂಚಾಯಿತಿ ಸದಸ್ಯರಾದ ತಿಪ್ಪೇಸ್ವಾಮಿ, ಆರೋಗ್ಯ ಸಹಾಯಕಿಯರು ಇನ್ನಿತರರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















