ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ(ಚಿತ್ರದುರ್ಗ) |
ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ #Betting Case ಈಗಾಗಲೇ ಬಂಧಿತರಾಗಿರುವ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ #Congress MLA Veerendra Pappi ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದ್ದು, ಇಡಿ ಅಧಿಕಾರಿಗಳು ಸುಮಾರು 50 ಕೋಟಿ ರೂ. ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಬ್ಯಾಂಕ್’ನ 2 ಲಾಕರ್’ನಲ್ಲಿದ್ದ ಸುಮಾರು 50 ಕೋಟಿ ರೂ. ಮೌಲ್ಯದ 44 ಕೆಜಿ ಚಿನ್ನವನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಮೂಲಕ ಈವರೆಗೂ 150 ಕೋಟಿ ರೂ.ಗೂ ಅಧಿಕ ಮೌಲ್ಯದ ವಸ್ತುಗಳನ್ನು ಸೀಜ್ ಮಾಡಿದಂತಾಗಿದೆ.

ಆ ವೇಳೆ ಸುಮಾರು 30 ಕಡೆ ನಡೆದ ದಾಳಿಯಲ್ಲಿ 12 ಕೋಟಿ ರೂ ನಗದು, 6 ಕೋಟಿ ರೂ ಮೌಲ್ಯದ ಚಿನ್ನ, ವಿದೇಶಿ ಕರೆನ್ಸಿ ಸೇರಿದಂತೆ ಕೋಟ್ಯಂತರ ಮೌಲ್ಯದ ಆಸ್ತಿ ವಶಕ್ಕೆ ಪಡೆದಿದ್ದರು.

ಅಲ್ಲದೇ 5 ಐಷಾರಾಮಿ ವಾಹನಗಳನ್ನು ಕೂಡ ಇಡಿ ಅಧಿಕಾರಿಗಳು ಸೀಜ್ ಮಾಡಿದ್ದು, ಶಾಸಕ ಪಪ್ಪಿ ಅವರಿಗೆ ಸೇರಿದ 17 ಬ್ಯಾಂಕ್ ಅಕೌಂಟ್ ಹಾಗೂ 2 ಲಾಕರ್’ಗಳನ್ನು ಸೀಜ್ ಮಾಡಿದ್ದಾರೆ.
ಅಲ್ಲದೇ, ಪಪ್ಪಿ ಅವರ ಬ್ಯಾಂಕ್ ಖಾತೆಗಳಲ್ಲಿ ಒಟ್ಟು 40.69 ಕೋಟಿ ರೂ. ಪತ್ತೆಯಾಗಿದ್ದು, 262 ಮ್ಯೂಲ್ ಖಾತೆಗಳಲ್ಲಿ ಒಟ್ಟು 14.46 ಕೋಟಿ ರೂ. ಸೇರಿದಂತೆ 55 ಕೋಟಿ ರೂ. ಹಣವನ್ನು ಇಡಿ ಫ್ರೀಜ್ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    
 
	    	





 Loading ...
 Loading ... 
							



 
                
Discussion about this post