ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಶಾಸಕ ಟಿ. ರಘುಮೂರ್ತಿ ತಾಲೂಕು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಸ್ಥಿತಿಗತಿಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಕೊರೋನಾ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಸ್ವಚ್ಚತೆಯನ್ನು ಕಾಪಾಡುವುದು ಜೊತೆಗೆ ದಾಖಲಾಗುವ ರೋಗಿಗಳಿಗೆ ಸಾಧ್ಯವಾದಷಟು ಇಲ್ಲಿಯೇ ಸೂಕ್ತ ಚಿಕಿತ್ಸೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ತುರ್ತು ಚಿಕಿತ್ಸೆ ಅಥವಾ ಇಲ್ಲಿನ ಸೌಲಭ್ಯ ಕೊರತೆಯಾದಾಗ ಮಾತ್ರ ರೋಗಿಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಬೇಕೆಂದು ತಾಕೀತು ಮಾಡಿದರು. ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ವಿಶೇಷ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಕೋವಿಡ್ ಸೋಂಕಿತರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕೋವಿಡ್ ಚಿಕಿತ್ಸೆ ಕೇಂದ್ರ, ಡಯಾಲಿಸಸ್, ತುರ್ತು ಘಟಕವನ್ನು ಪರೀಶೀಲಿಸಿದರು. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶಗೌಡ, ಪಿ.ಐ.ಜೆ. ತಿಪ್ಪೇಸ್ವಾಮಿ, ವೈದ್ಯಧಿಕಾರಿ ವೆಂಕಟೇಶ, ಆರೋಗ್ಯಾಧಿಕಾರಿ ಕುದಾಪುರ ತಿಪ್ಪೇಸ್ವಾಮಿ ಇತರರಿದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post