ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಕೊರೋನಾ ಎರಡನೆಯ ಅಲೆ ಅತಿ ವೇಗವಾಗಿ ಎಲ್ಲೆಡೆ ವ್ಯಾಪಿಸುತ್ತಿದ್ದು, ಹಳ್ಳಿಗಳಿಗೂ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅತಿ ಹೆಚ್ಚು ಜಾಗ್ರತೆಯಿಂದ ಇರಿ ಎಂದು ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಜನತೆಯಲ್ಲಿ ಮನವಿ ಮಾಡಿದ್ದಾರೆ.
ನಗರದ ಶಾಸಕರ ಭವನದಲ್ಲಿ ಕೋರೋನಾ ಜಾಗೃತಿ ವಿಚಾರವಾಗಿ ಮಾತನಾಡಿದ ಅವರು, ಇಂದು ನೋಡಿದ ವ್ಯಕ್ತಿ ನಾಳೆ ಕೋವಿಡ್ ಸೋಂಕು ತಗಲಿ ಸಾವನ್ನಪ್ಪುತ್ತಿರುವುದನ್ನು ನಾವು ಇಲ್ಲಿ ಕಾಣುತ್ತಿದ್ದೇವೆ. ಎಂದೂ ಕಾಣದಂತಹ ಮಹಾಮಾರಿ ಇಡೀ ಪ್ರಪಂಚವನ್ನೇ ತಲ್ಲಣಗೊಳಿಸಿ ಆರ್ಥಿಕ ವ್ಯವಸ್ಥೆಯನ್ನೆ ಬುಡಮೇಲು ಮಾಡಿದೆ. ಜನರ ಬದುಕು ದುಸ್ತರವಾಗಿದೆ. ಇನ್ನಾದರು ಸಾರ್ವಜನಿಕ ಕರು ಹೆಚ್ಚೆತು ಕೊಳ್ಳದಿದ್ದರೆ ಇನ್ನೆಷ್ಟು ಸಾವು-ನೋವು ಅನುಭವಿಸಬೇಕಾಗುತ್ತದೋ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ನಗರಸಭೆ ವತಿಯಿಂದ ನಗರದ ಎಲ್ಲಾ ರಸ್ತೆಗಳಿಗೆ ಸ್ಯಾನಿಟೈಜರ್ ಮಾಡಿಸಲಾಗಿದೆ. ಕೋವಿಡ್ ಆಸ್ಪತ್ರೆ ತೆರೆಯಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸ್ಯಾನಿಟೈಜರ್ ಮಾಡಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಹೊರಗಿನಿಂದ ಬದವರ ಬಗ್ಗೆ ಮಾಹಿತಿ ಪಡದು ಅವರನ್ನೂ ಹೋಮ್ ಕ್ವಾರೆಂಟೈನ್‌ನಲ್ಲಿ ಇಡಲು ವ್ಯವಸ್ಥೆ ಮಾಡಲಾಗಿದೆ. ಇಂತಹ ಸಮಯದಲ್ಲಿ ಸರ್ಕಾರ ಬಡವರಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಬಡವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು, ಪಡಿತರ ಅಕ್ಕಿ ಹೆಚ್ಚಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post