ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಜ್ವರ, ಕೆಮ್ಮು, ನೆಗಡಿ, ಉಸಿರಾಟ ತೊಂದರೆ, ಮೈಕೈ ನೋವು ಬಂದರೆ ನಿರ್ಲಕ್ಷಿಸಬೇಡಿ. ತಕ್ಷಣವೇ ಅರೋಗ್ಯ ಸಹಾಯಕಿ, ವೈದ್ಯರನ್ನು ಬೇಟಿ ಮಾಡಿ ಎಂದು ಸಂಸದ ಎ. ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.
ತಾಲೂಕು ಬೇಡರೆಡ್ಡಿ ಹಳ್ಳಿ ಮತ್ತು ಮೊಳಕಾಲ್ಮೂರು ತಾಲ್ಲೂಕು ತಳವಾರಹಳ್ಳಿ ಗ್ರಾಮಕ್ಕೆ ತೆರಳಿದ ಗ್ರಾಮೀಣ ಜನರಲ್ಲಿ ಕೊರೋನ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಗ್ರಾಮದ ಜನರು ಕೆಮ್ಮು, ನೆಗಡಿ, ಜ್ವರ ಕಾಣಿಸಿಕೊಂಡರೆ ತಕ್ಷಣವೇ ವೈದ್ಯರನ್ನು ಬೇಟಿ ಮಾಡಬೇಕು. ಜ್ವರ ಹಾಗೂ ಕೊರೋನ ಸೋಂಕಿನಿಂದ ಬಳಲುತ್ತಿದ್ದ ಗ್ರಾಮಸ್ಥರಿಗೆ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಿ ಎಂದು ತಿಳಿಸಿದರು. ಜ್ವರ ಬಂದರೆ ಯಾವುದೇ ಕಾರಣಕ್ಕೂ ಮುಚ್ಚಿಡಬೇಡಿ ಎಂದು ಮನವಿ ಮಾಡಿದರು.
ಹೋಂ ಐಸೋಲೇಷನ್‌ಗಿಂತ ಆಸ್ಪತ್ರೆಗೆ ದಾಖಲಾಗುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ. ಒಂದು ವೇಳೆ ಪಾಸಿಟಿವ್ ಬಂದರೆ ಕೂಡಲೇ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗಿ ಎಂದು ಸೂಚಿಸಿದರು.
ಈ ಸಮಯದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಪಂ ಸಿಇಒ ಡಾ. ನಂದಿನಿ ದೇವಿ, ಎಸ್‌ಪಿ ಜಿ.ರಾಧಿಕಾ, ಅರೋಗ್ಯ ಅಧಿಕಾರಿ ತಿಪ್ಪೇಸ್ವಾಮಿ, ಕೋರೋನಾ ವಾರಿಯರ್ಸಗಳಾದ ಅರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತರು ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post