ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ತಾಲೂಕಿನ ಸಮೀಪದ ಬುಡ್ನಹಟ್ಟಿ ಬಳಿಯ ರಾಷ್ಟೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ನಡುವೆ ಮುಖಾಮುಖಿ ಅಪಘಾತ ನಡೆದು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸಿಮೆಂಟ್ ತುಂಬಿಕೊಂಡು ಬಳ್ಳಾರಿ ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಲಾರಿ ಬಳ್ಳಾರಿ ಕಡೆಗೆ ಹೊರಟಿದ್ದ ಲಾರಿಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಾಗೂ ಇನ್ನೋರ್ವ ಚಾಲಕನ ಎರಡು ಕಾಲಿಗೂ ಗಾಯವಾಗಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.
ಅಂಧ್ರಪ್ರದೇಶ ಅನಂತಪುರ ಜಿಲ್ಲೆಯ ಪೇನ್ನಗೊಂಡದ ಗೋರಂಡಲ್ ಮಂಡಲ್ ಗುಮ್ಮಯಗಾರಿ ಪಲ್ಲಿ ಗ್ರಾಮದ ಜಗದೀಶ (28)ಮೃತ ಚಾಲಕ ಎಂದು ಗುರುತಿಸಲಾಗಿದೆ. ತಮಿಳುನಾಡಿನ ಅರೋಕ್ಯಾಸ್ವಾಮಿ (55) ಗಾಯಾಳುವಾಗಿದ್ದಾರೆ ಎಂದು ಹೇಳಲಾಗಿದೆ.

ಘಟನಾ ಸ್ಥಳಕ್ಕೆ ಪೋಲೀಸ್ ಇನ್ಸ್‌ಪೆಕ್ಟರ್ ಜೆ.ಎಸ್. ತಿಪ್ಪೇಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















