ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ನಗರದ ಶಾಸಕರ ಭವನದಲ್ಲಿ ವಿಕಲಚೇತನರಾದ ಸಿದ್ದಪ್ಪ ಅವರಿಂದ ಕೇಕ್ ಕಟ್ ಮಾಡಿಸಿ ಕಾಂಗ್ರೆಸ್ ಮುಖಂಡರು ಮಾಜಿ ಸಿಎಂ ಸಿದ್ದರಾಮಯ್ಯ ಅವರ 74 ನೆಯ ವರ್ಷ ಜನ್ಮ ದಿನ ಆಚರಿಸಿದರು.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಸದಸ್ಯ ವೆಂಕಟೇಶ್, ಐದು ವರ್ಷಗಳ ಭ್ರಷ್ಟಚಾರ ರಹಿತ ಆಡಳಿತ ನಡೆಸಿದ್ದಾರೆ ಎಂದರೆ ಅದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎಂದು ಹೇಳಿದರು.
ಸಿದ್ದರಾಮಯ್ಯ ಅವರು ಸಾಕಷ್ಟು ಜನಪರ, ಹಿಂದುಳಿದವರ, ದಲಿತರಪರ ಕಾಳಜಿವುಳ್ಳ ನಾಯಕರಾಗಿ ಅವರು ಮುಖ್ಯಮಂತ್ರಿಯಾದಾಗ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದು ಭ್ರಷ್ಟಚಾರ ರಹಿತ ಆಡಳಿತವನ್ನು ಐದು ವರ್ಷಗಳ ಕಾಲ ನಡೆಸಿದರು ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಸನ್ನ, ನಗರಸಭೆ ಸದಸ್ಯ ವೆಂಕಟೇಶ್, ಹಿಂದುಳಿದ ವರ್ಗಗಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೊರ್ಲಕಟ್ಟೆ ಉಮೇಶ್, ಕೃಷ್ಣಮೂರ್ತಿ, ತಾಪಂ ಮಾಜಿ ಅಧ್ಯಕ್ಷ ರಂಗಸ್ವಾಮಿ, ಪ್ರಕಾಶ್ ಸೇರಿದಂತೆ ಮುಂತಾದವರು ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post