ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ : ವಿದ್ಯಾರ್ಥಿಗಳು ಶ್ರದ್ದೆಯಿಂದ ಓದಬೇಕು ಎಂದು ಶಾಸಕ ಟಿ.ರಘುಮೂರ್ತಿ ಪದವಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ವಿವಿಧ ಸಮಿತಿ ಹಾಗೂ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಮಕ್ಕಳಿಗೆ ಉನ್ನತ ಶಿಕ್ಷಣದ ಸೌಲಭ್ಯವನ್ನು ಒದಗಿಸುವ ಸಲುವಾಗಿ ಸರ್ಕಾರ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದೆ. ಅದನ್ನು ಪ್ರತಿಯೊಬ್ಬರು ಮನವರಿಕೆ ಮಾಡಿಕೊಂಡು ಮಕ್ಕಳಿಗೆ ಉನ್ನತ ಶಿಕ್ಷಣವನ್ನು ತಪ್ಪದೇ ಕೊಡಿಸಬೇಕು ಎಂದು ಪೋಷಕರಿಗೆ ಸಲಹೆ ನೀಡಿದರು.
ಪ್ರಾಂಶುಪಾಲ ಪ್ರೊ.ಎಂ.ಶಿವಲಿಂಗಪ್ಪ ಮಾತನಾಡಿ, ಕಾಲೇಜು ಶಿಕ್ಷಣ ಇಲಾಖೆ ಅಭಿವೃದ್ಧಿ ಪಡಿಸಿರುವ ಎಲ್‌ಎಂಎಸ್ ಬೋಧಾನ ವಿಧಾನವನ್ನು ಬಳಕೆ ಮಾಡಿಕೊಳ್ಳಲು ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಇಂಗ್ಲಿಷ್ ವಿಭಾಗದ ಹಿರಿಯ ಪ್ರಾಧ್ಯಾಪಕ ಎನ್.ಈರಣ್ಣ ಮಾತನಾಡಿ, ಗುರಿಯ ಜತೆಗೆ ವಿದ್ಯಾರ್ಥಿಗಳು ಬದ್ಧತೆಯನ್ನು ಹೊಂದಿರಬೇಕು ಎಂದು ಹೇಳಿದರು.
ಸಾಂಸ್ಕೃತಿಕ ಸಮಿತಿ ಸಂಚಾಲಕ ಪ್ರೊ.ಎಸ್.ಬಿ.ಶಿವಪ್ರಸಾದ್, ಇತಿಹಾಸ ವಿಭಾಗದ ಮುಖ್ಯಸ್ಥ ಪ್ರೊ.ಸಿ.ಜಗದೀಶ್, ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಸಿ.ವಿ.ಕವಿತಾ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ರಾಜೇಶ್ವರಿ ಪೂಜಾರಿ, ಸಹಾಯಕ ಪ್ರಾಧ್ಯಾಪಕ ಪ್ರೊ.ಡಿ.ಎನ್.ರಘುನಾಥ್ ಮಾತನಾಡಿದರು.
ಕನ್ನಡ ಸಹಾಯಕ ಪ್ರಾಧ್ಯಾಪಕ ಪ್ರೊ.ಎಂ.ಕೃಷ್ಣೇಗೌಡ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post