ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಐತಿಹಾಸಿಕ ಹಳೆಯ ದೇವಸ್ಥಾನಗಳು ಶಿಥಿಲಾವಸ್ಥೆ ತಲುಪಿದ್ದರೆ ದಯವಿಟ್ಟು ನಮ್ಮ ಸಂಸ್ಥೆ ಗಮನಕ್ಕೆ ತನ್ನಿ ನಾವು ಆ ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡುತ್ತೇವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ Shri Kshetra Dharmasthala Dharmadhikari Dr. Veerendra Heggade ಸಹೋದರ ಸುಜೇಂದ್ರ ಹೆಗ್ಗಡೆ ತಿಳಿಸಿದರು.
ತಾಲೂಕಿನ ಬೆಳಗೆರೆ ಗ್ರಾಮದ ಹೊರವಲಯದಲ್ಲಿರುವ ಐತಿಹಾಸಿಕ ಹಿನ್ನೆಲೆ ಹೊಂದಿರುವ ಲಕ್ಷ್ಮಿ ಶ್ರೀ ರಂಗನಾಥಸ್ವಾಮಿ ವಿಗ್ರಹ ಪುನರ್ ಪ್ರತಿಷ್ಠಾಪನಾ ಮತ್ತು ನೂತನ ದೇವಸ್ಥಾನದ ಲೋಕರ್ಪಣೆ ಮಹೋತ್ಸವ ಭಾರತದಲ್ಲಿ ರಾಜಗೋಪುರ ಲೋಕಾರ್ಪಣೆಗೊಳಿಸಿ ನಂತರ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬೆಳಗೆರೆ ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಶ್ರೀ ಧರ್ಮಸ್ಥಳಕ್ಕೆ ಬಂದು ಮನವಿ ಮಾಡಿದ ಹಿನ್ನೆಲೆ ಸ್ಪಂದಿಸಿ ದೇವಸ್ಥಾನ ಜೀರ್ಣೋದ್ಧಾರ ಮಾಡಿ ಲೋಕಾರ್ಪಣೆಗೊಂಡಿದೆ. ಇಲ್ಲಿನ ಟ್ರಸ್ಟ್ ನವರು ಸಹ ತುಂಬಾ ಶ್ರದ್ಧೆ ವಹಿಸಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರಮಿಸಿದ್ದಾರೆ. ಇದಕ್ಕೆ ಮಂಜುನಾಥನೇ ನಮಗೆ ಸ್ಪೂರ್ತಿಯಾಗಿ ನಿಂತಿದ್ದಾನೆ ಎಂದು ಹೇಳಿದರು.
ಹಿಂದೆ ಯಾವ ರೀತಿ ದೇವಸ್ಥಾನವಿತ್ತು ಅದೇರೀತಿ ನಾವು ದೇವಸ್ಥಾನಗಳನ್ನು ಪುನರ್ ನಿರ್ಮಾಣ ಮಾಡುತ್ತೇವೆ. ಹೊಸ ದೇವಸ್ಥಾನವನ್ನು ನಾವು ಮಾಡುವುದಿಲ್ಲ. ದೇವಸ್ಥಾನ ನಿರ್ಮಿಸಿರುವುದು ಊರಿನ ರಕ್ಷಣೆಗಾಗಿ, ಅದಕ್ಕಾಗಿಯೇ ಹಳೆ ದೇವಸ್ಥಾನಗಳನ್ನು ಪುನರ್ ನಿರ್ಮಾಣ ಮಾಡಿ ಮೊದಲು ಯಾವ ರೀತಿ ಇತ್ತೋ ಹಾಗೆಯೇ ದೇವಸ್ಥಾನಗಳ ನಿರ್ಮಾಣ ಮಾಡಲಾಗುತ್ತದೆ ಎಂದರು.
Also read: ಬಂಟ್ವಾಳ: ವಿಠ್ಠಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜೀವಿತಗೆ 580 ಅಂಕ
ವೀರೇಂದ್ರ ಹೆಗ್ಗಡೆ ಅವರ ಮಾರ್ಗದರ್ಶನದಲ್ಲಿ ದೇವಸ್ಥಾನಗಳನ್ನು ಪುನರ್ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿ ದೊಡ್ಡ ಹಬ್ಬವೆಂಬಂತೆ ಅದ್ದೂರಿಯಾಗಿ ನಡೆದಿದೆ. ನಾವು ನಿರ್ಮಾಣ ಮಾಡಿ ನಿಮ್ಮ ಕೈಗೆ ಕೊಟ್ಟಿದ್ದೇವೆ ಇದನ್ನು ನಡೆಸಿಕೊಂಡು ಹೋಗುವ ಹೊಣೆ ನಿಮ್ಮದು ಎಂದರು.
ಶಾಸಕ ಟಿ. ರಘುಮೂರ್ತಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯು ಜನಪರ ಕಾಳಜಿವಹಿಸಿ ಜನಪರ ಕೆಲಸಗಳನ್ನು ಮಾಡಿಕೊಂಡು ಬರುತ್ತಿದೆ. ಇಂದು ಈ ಸಂಸ್ಥೆಯಿಂದ ಹಲವು ಮಹಿಳಾ ಸಂಘಗಳು ಹುಟ್ಟಿಕೊಂಡಿದ್ದು, ಮಹಿಳೆಯರು ನೆಮ್ಮದಿ ಜೀವನಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಈ ಸಂಸ್ಥೆಯು ಗ್ರಾಮೀಣ ಪ್ರದೇಶದಲ್ಲಿ ಕೆರೆ ಹೂಳು ತೆಗೆಯುವುದು ಗಿಡ ನಡೆಸುವುದು ದೇವಸ್ಥಾನಗಳ ಜೀರ್ಣೋದ್ಧಾರ ಮಾಡುವುದು ಹೀಗೆ ಹತ್ತು ಹಲವು ಜನಪರ ಕಾರ್ಯಗಳನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಇತಿಹಾಸವುಳ್ಳ ಈ ದೇವಸ್ಥಾನವನ್ನು ಪುನರ್ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದರು.
ಇತ್ತೀಚೆಗೆ ಚಳ್ಳಕೆರೆ ನಗರದಲ್ಲಿ ಸಾಯಿಬಾಬಾ ದೇವಸ್ಥಾನ ಶಂಕು ಸ್ಥಾಪನೆ ಆಗಿದ್ದು, ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬಂದು ಹೋಗುತ್ತಾರೆ. ಇದೇ ರೀತಿಯಾಗಿ ಚಳ್ಳಕೆರೆ ನಗರದ ಹೊಸ ಬ್ಯಾಡರ ಹಟ್ಟಿಯಲ್ಲಿ ಶ್ರೀ ಗುರು ರಾಘವೇಂದ್ರ ಮಠ ಸ್ಥಾಪನೆಯಾಗಿತ್ತು. ಇನ್ನು ಇದೇ ಬೆಳಗೆರೆ ಗ್ರಾಮದಲ್ಲಿ ತಿಮ್ಮಪ್ಪ ದೇವಸ್ಥಾನ ಉದ್ಘಾಟನೆಯಾಯಿತು ಇಂದು ಲಕ್ಷ್ಮಿರಂಗನಾಥಸ್ವಾಮಿ ಉದ್ಘಾಟನೆ ಆಗುತ್ತಿರುವುದು ಸಂತಸವಾಗಿದೆ ಎಂದರು.
ತಹಶಿಲ್ದಾರ್ ಎನ್. ರಘುಮೂರ್ತಿ ಮಾತನಾಡಿ, ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ಸ್ವಸ್ಥ ಸಮಾಜದ ಅಭಿವೃದ್ಧಿ ಕಾರ್ಯಕ್ರಮಗಳಾದ ದೇವಸ್ಥಾನ ಪುನರ್‌ನಿರ್ಮಾಣ, ಕೆರೆ ಹೂಳು ತೆಗೆಯುವುದು, ಹಿಂದೂ ರುದ್ರಭೂಮಿ ಅಭಿವೃದ್ಧಿ, ದೇವಸ್ಥಾನದ ಅಭಿವೃದ್ಧಿ ಸಮುದಾಯಭವನ, ಹಾಲು ಉತ್ಪಾದಕರ ಕಟ್ಟಡ, ನಿರ್ಗತಿಕರ ಮಾಶಾಸನ, ಸುಗ್ನನನಿಧಿ ಗೋಶಾಲೆ, ಸಾರ್ವಜನಿಕ ಶೌಚಾಲಯ, ಶುದ್ಧ ಕುಡಿಯುವ ನೀರಿನ ಘಟಕ ಮುಂತಾದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಹಾಗೂ ಬೆಳಗೆರೆ ಗ್ರಾಮದಲ್ಲಿ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಲಕ್ಷ್ಮಿ ರಂಗನಾಥಸ್ವಾಮಿ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿರುವುದು ಶ್ಲಾಘನೀಯ ಎಂದರು.
ಈ ಕಾರ್ಯಕ್ರಮದಲ್ಲಿ ಮುಖಂಡರಾದ ಕೆ.ಟಿ. ಕುಮಾರಸ್ವಾಮಿ ಜೆಡಿಎಸ್ ಮುಖಂಡರಾದ ಎಂ. ರವೀಶ್ ಕುಮಾರ್ ಹಾಗೂ ದೇವಸ್ಥಾನದ ಟ್ರಸ್ಟ್ ನ ಅಧ್ಯಕ್ಷ ಕೆ ಟಿ. ನಿಜಲಿಂಗಪ್ಪ, ರಾಜಶೇಖರಯ್ಯ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಬೆಳಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ರವಿ ಉಪಾಧ್ಯಕ್ಷರಾದ ರೂಪ ಕೃಷ್ಣಮೂರ್ತಿ ಹಾಗೂ ಸದಸ್ಯರು ಕೆಎಂಎಫ್ ನಿರ್ದೇಶಕ ವೀರಭದ್ರ ಬಾಬು, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಸಮರ್ಥ ರಾಯ್, ದೇವಸ್ಥಾನದ ಟ್ರಸ್ಟ್‌ನ ಪದಾಧಿಕಾರಿಗಳು ನಿವೃತ್ತ ಮುಖ್ಯಶಿಕ್ಷಕ ರಾಜಣ್ಣ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಕುಮಾರ್ ವೀರಪ್ಪ, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಮುಖಂಡರು, ಸಾವಿರಾರು ಭಕ್ತರು ಆಗಮಿಸಿದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post