ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಮಹಾರಾಷ್ಟ್ರದ ಎಂಇಎಸ್ ಸಂಘಟನೆಯೂ ಕನ್ನಡ ಬಾವುಟವನ್ನು ಸುಟ್ಟು ಹಾಕಿರುವುದನ್ನು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸಿದ್ದು, ಇಂತಹ ದುಷ್ಟರನ್ನು ಗಡಿಪಾರು ಮಾಡಬೇಕು ಎಂದು ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ. ಈಶ್ವರಪ್ಪ ಹೇಳಿದರು.
ಇತ್ತೀಚೆಗೆ ಬೆಳಗಾವಿಯ ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಟ್ಟುಹಾಕಿದ ಕಿಡಿಗೇಡಿಗಳ ವಿರುದ್ಧ ಪ್ರತಿಭಟಿಸಿ, ತಾಲೂಕು ಶಿರಸ್ತೆದಾರ ಮೂಲಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಿ, ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡುವಂತೆ ಒತ್ತಾಯಿಸಿದೆ.
ಕನ್ನಡ ನಾಡಿನಲ್ಲಿದ್ದುಕೊಂಡು ಇಂತಹ ದುಷ್ಕೃತ್ಯವನ್ನು ಮಾಡಿರುವುದುನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಸರ್ಕಾರ ಕೂಡಲೇ ಈ ಸಂಘಟನೆಯ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳಬೇಕು. ದಿನೆ ದಿನೇ ಕಿಡಿಗೇಡಿಗಳ ಕೃತ್ಯ ಮುಂದುವರೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಬೇಕಾಗಿದೆ. ಇದನ್ನು ಹೀಗೆಯೇ ಬಿಟ್ಟರೆ ಮುಂದಿನ ದಿನಗಳಲ್ಲಿ ದೊಡ್ಡದಾಗಿ ಬೆಳೆಯಲು ಅನುವಾಗುತ್ತದೆ.ಇದರಿಂದ ಕೂಡಲೇ ಸರ್ಕಾರ ಈ ಸಂಘಟನೆ ಮೇಲೆ ಶಿಸ್ತಿನ ಕ್ರಮ ಜರುಗಿಸಬೇಕು ಎಂದರು.
ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕ ಕೊರ್ಲಕುಂಟೆ ತಿಪ್ಪೇಸ್ವಾಮಿ ಮಾತನಾಡಿ, ಕನ್ನಡ ಬಾವುಟ ದಹಿಸಿರುವುದು ಕನ್ನಡ ನಾಡಿಗೆ ಅವಮಾನ ಮಾಡಿದಂತೆ ಇಂತಹ ಪುಂಡರನ್ನು ಸರ್ಕಾರ ಗಡಿಪಾರು ಮಾಡಬೇಕು. ಇಂತಹ ಕೃತ್ಯಗಳು ಆಗದಂತೆ ಎಚ್ಚರವಹಿಸಬೇಕು. ಈ ಹಿಂದೆ ಹಲವು ಬಾರಿ ಕನ್ನಡ ರಕ್ಷಣೆಗಾಗಿ ಮನವಿಯನ್ನು ಸಲ್ಲಿಸಲಾಗಿದೆ. ಇಂತಹ ಕೃತ್ಯವನ್ನು ಖಂಡಿಸುತ್ತೇವೆ. ಕನ್ನಡಕ್ಕಾಗಿ ಉಗ್ರ ಹೋರಾಟಗಳು ಸಹ ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಸಾಹಿತಿ ಟಿ.ಜೆ. ತಿಪ್ಪೇಸ್ವಾಮಿ ರೈತ ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ವೀರೇಶ್, ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾದ ವೀರಣ್ಣ, ರಾಮಾಂಜನೇಯ, ಸುರೇಶ್ ಬೆಳಗೆರೆ ಸಂಘಟನೆಗಳ ಮುಖಂಡರಾದ ಚನ್ನಿಗ ರಾಮಯ್ಯ, ಸೈಯದ್ ಸಾಬ್, ಕೆಜಿಎನ್ ಮುಜೀಬ್ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು, ವಿವಿಧ ಸಂಘಟನೆಗಳ ಸದಸ್ಯರು ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post