ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಕನ್ನಡ ಬಾವುಟ ಸುಟ್ಟು ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿರುವ ಎಂಇಎಸ್ ಮತ್ತು ಶಿವಸೇನೆಯನ್ನು ರಾಜ್ಯದಲ್ಲಿ ನಿಷೇಧ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಹಲವು ಬಣಗಳು ತಹಸಿಲ್ದಾರ್‌ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಮತ್ತು ಅಧ್ಯಕ್ಷ ಬಾಬು ಮಾತನಾಡಿ, ನಾಡದ್ರೋಹಿ ಎಂಇಎಸ್ ಮತ್ತು ಶಿವಸೇನೆ ಕನ್ನಡಿಗರ ಉಸಿರಿನ ಬಾವುಟವನ್ನು ಸುಟ್ಟು ಕೋಟ್ಯಂತರ ಕನ್ನಡಿಗರ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ. ಎಂಇಎಸ್ ಮತ್ತು ಶಿವಸೇನೆಯ ಕರ್ನಾಟಕ ರಾಜ್ಯದಲ್ಲಿ ನಿ?ಧ ಮಾಡಬೇಕು ಮತ್ತು ಕನ್ನಡ ಬಾವುಟ ದಹಿಸಿ ಕಿಚ್ಚನ್ನು ಹಚ್ಚಿದ ಕಿಡಿಗೇಡಿಗಳನ್ನು ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಸಾಹಿತಿ ಟಿ.ಜೆ. ತಿಪ್ಪೇಸ್ವಾಮಿ ಮಾತನಾಡಿ, ಕನ್ನಡ ಬಾವುಟವನ್ನು ದಹಿಸಿ ಪುಂಡಾಟಿಕೆ ಮೆರೆದ ಪುಂಡರನ್ನು ದೇಶದಿಂದ ಓಡಿಸಬೇಕು. ಇಂತಹ ಸಮಯದಲ್ಲಿ ಎಲ್ಲಾ ಸಂಘ-ಸಂಸ್ಥೆಗಳು ಒಗ್ಗಟ್ಟಿನ ಬಲ ತೋರಿಸಬೇಕು. ಸರ್ಕಾರ ನಿರ್ಲಕ್ಷ್ಯ ತೋರದೆ ಇಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಈಶ್ವರಪ್ಪ, ರೈತ ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ, ಕರ್ನಾಟಕ ರಕ್ಷಣಾ ವೇದಿಕೆ ಉಪಾಧ್ಯಕ್ಷ ರಾಜು, ವೆಂಕಟೇಶ್, ವಿಜಯಕುಮಾರ್, ಬಸವರಾಜ್ ನಾಗೇಂದ್ರಪ್ಪ ಬಾಬು ಜಯಣ್ಣ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post