ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಕಳಪೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕ ಮಾರಾಟ ಮಾಡಿದರೆ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಮೋಹನ್‌ಕುಮಾರ್ ಎಚ್ಚರಿಕೆ ನೀಡಿದರು.
ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್‌ಡೌನ್ ಆಗಿ ರೈತರು ಬೆಳೆದ ಬೆಳೆಗಳನ್ನು ಮಾರಾಟ ಮಾಡಿಕೊಳ್ಳಲಾಗದೆ ನಷ್ಟ ಅನುಭಸುತ್ತಿದ್ದಾರೆ. ಇಂತಹ ಸಮಯದಲ್ಲಿ ಗೊಬ್ಬರದ ಅಂಗಡಿಗಳು ಬೀಜ ರಸಗೋಬ್ಬರ, ಕೀಟನಾಶಕವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಡಿಕೊಳ್ಳುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಹಲವು ರಸಗೊಬ್ಬರ ಅಂಗಡಿಗಳಿಗೆ ಭೇಟಿ ನೀಡಿ ಗೊಬ್ಬರ ಮತ್ತು ಬೀಜದ ದರಪಟ್ಟಿ, ದಾಸ್ತಾನು ಪರಿಶೀಲಿಸಿದರು.
ರೈತರಿಗೆ ಬಿಲ್ ನೀಡದ ಕೋರಮಂಡಲದ ಅಂಗಡಿಯೊಂದರ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕಳಪೆ ಬೀಜ ಮತ್ತು ಗೊಬ್ಬರ ಮಾರಾಟ ಮಾಡುವುದು ಕಂಡು ಬಂದಲ್ಲಿ ಕೂಡಲೇ ಇಲಾಖೆ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ರೈತರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಂತ್ರಿಕಾಧಿಕಾರಿ ರವಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post