ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಕೊರೋನಾ ದಿನ ದಿನಕ್ಕೂ ಹಬ್ಬುತ್ತಿರುವ ಕಾರಣ ತಪ್ಪದೆ ಮಾಸ್ಕ್ ಧರಿಸಬೇಕು ಸಾಮಾಜಿಕ ಅಂತರ ಕಾಪಾಡಿಕೊಂಡು ಆರೋಗ್ಯದ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಸಕ್ರಿಯ ಕ್ಷಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಆರೋಗ್ಯದಲ್ಲಿ ಯಾವುದೇ ತೊಂದರೆ ಇದ್ದಲ್ಲಿ ವೈದ್ಯರ ಸಲಹೆ ಪಡೆದ ನಂತರ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಲು ಜನರು ಮುಂದಾಗಬೇಕು. ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ರೋಗಿಗಳ ತಪಾಸಣೆ ಮಾಡುವಲ್ಲಿ ಉದಾಸೀನ ಮಾಡಬಾರದು. ಸಾಮಾಜಿಕ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳ ಮನೆ ಮನೆಗೆ ಬೇಟಿ ನೀಡುವ ಮೂಲಕ ಕ್ಷಯ ರೋಗ ಪ್ರಕರಣಗಳನ್ನು ಪತ್ತೆ ಹಚ್ಚಬೇಕು. ಮತ್ತು ನರ-ಮೂರ್ಚೆ ರೋಗಿಗಳ ಬಗ್ಗೆ ಹೆಚ್ಚು ಗಮನಹರಿಸಬೇಕು ಎಂದು ವೈದ್ಯರಿಗೆ ಸಲಹೆ ನೀಡಿದರು.
ಆರೋಗ್ಯ ಇಲಾಖೆ ತಾಲೂಕು ಆಡಳಿತಾಧಿಕಾರಿ ಡಾ.ಪ್ರೇಮಸುಧಾ, ಬಿಪಿ 2851, ಶುಗರ್ 3180, ಎಚ್‌ಐವಿ 112, ಕ್ಯಾನ್ಸರ್ 164, ನರ-ಮೂರ್ಚೆರೋಗ ಸೇರಿ ತಾಲೂಕಿನಲ್ಲಿ ಒಟ್ಟು 6307 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಡಿಸೆಂಬರ್ ತಿಂಗಳ ಒಳಗೆ ಇನ್ನು 9.ಸಾವಿರ ಕ್ಷಯ ರೋಗಿಗಳನ್ನು ಗುತಿಸಬೇಕಿದೆ ಎಂದರು.
ತಾಲೂಕು ಪಂಚಾಯಿತಿ ಅಧ್ಯಕ್ಷ ತಿಪ್ಪೇಸ್ವಾಮಿ, ಆಸ್ಪತ್ರೆಯ ತಾಲ್ಲೂಕು ಆರೋಗ್ಯಾಧಿಕಾರಿ ತಿಪ್ಪೇಸ್ವಾಮಿ ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಹನುಮಕ್ಕ, ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ, ಉಪಾಧ್ಯಕ್ಷೆ ಜೈತುನ್ಬಿ, ಆರೋಗ್ಯ ಇಲಾಖೆ ಪ್ರೇಮಕುಮಾರ್, ಬ್ಲಾಕ್ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಟಿ.ಎ.ಟಿ. ಪ್ರಭುದೇವ್, ಎಪಿಎಂಸಿ ಮಾಜಿ ಅಧ್ಯಕ್ಷ ರೆಡ್ಡಿಹಳ್ಳಿ ಶಿವಣ್ಣ, ರೈತ ಮುಖಂಡ ರೆಡ್ಡಿಹಳ್ಳಿ ವೀರಣ್ಣ ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post