No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನಾಯಕನಹಟ್ಟಿ ಜಾತ್ರೆ ಪೂರ್ವಭಾವಿ ಸಭೆ: ಪ್ರಸಾದ ವಿತರಣೆಗೂ ಮುನ್ನ ಪರೀಕ್ಷೆಗೆ ಡಿಸಿ ಸೂಚನೆ

kalpa News by kalpa News
February 27, 2020
in Small Bytes, ಚಿತ್ರದುರ್ಗ
0
Share on FacebookShare on TwitterShare on WhatsApp

ಚಿತ್ರದುರ್ಗ: ಜಿಲ್ಲೆಯ ಐತಿಹಾಸಿಕ ಶ್ರೀ ಕ್ಷೇತ್ರ ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆ  ಮಾರ್ಚ್ 5 ರಿಂದ 16 ರವರೆಗೆ ನಡೆಯಲಿದ್ದು, ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸುಲು ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವಿನೂತ್ ಪ್ರಿಯಾ ಸೂಚನೆ ನೀಡಿದರು.

ಜಿಲ್ಲಾಡಳಿತದ ವತಿಯಿಂದ ಅಯೋಜಿಸಿದ್ದ ಶ್ರೀ ಕ್ಷೇತ್ರ ನಾಯಕನಹಟ್ಟಿ ಗುರುತಿಪ್ಪೇರುದ್ರ ಸ್ವಾಮಿ ಜಾತ್ರೆಯ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ವರ್ಷದಂತೆ ಈ ಬಾರಿಯು ಜಿಲ್ಲಾಡಳಿತದಿಂದ ಜಾತ್ರೆಗೆ ಸಂಬಂಧ ಪಟ್ಟಂತೆ ಕೆಲವು ಸಮಿತಿಗಳನ್ನು ರಚಿಸಿದ್ದು, ಅಧಿಕಾರಿಗಳು ಜಾತ್ರೆ ಸಿದ್ದತಾ ಕಾರ್ಯಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಕಾರ್ಯಕ್ರಮ ಯಶಸ್ವಿಯಾಗುವತ್ತ ಗಮನ ಹರಿಸಬೇಕು. ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗೆ ಕುಡಿಯುವ ನೀರಿನ ಕೊರತೆ ಕಾಡಬಾರದು. ಜನನಿಬಿಡಿ ಪ್ರದೇಶಗಳಲ್ಲಿ ನೀರಿನ ಟ್ಯಾಂಕರ್’ಗಳ ವ್ಯವಸ್ಥೆ ಮಾಡಬೇಕು. ನೀರಿನ ಟ್ಯಾಂಕರ್’ಗಳ ಮೇಲೆ ದೂರವಾಣಿ ಸಂಖ್ಯೆ ಹಾಗೂ ಕುಡಿಯುವ ನೀರು ಸರಬರಾಜು ಸೌಲಭ್ಯಕ್ಕಾಗಿ ಸಹಾಯವಾಣಿ ಸಂಖ್ಯೆಯನ್ನು ನಮೂದಿಸಬೇಕು. ಗುಣಮಟ್ಟ ಹಾಗೂ ಶುದ್ಧ ಕುಡಿಯುವ ನೀರು ಕಾಲಕಾಲಕ್ಕೆ ಭಕ್ತರಿಗೆ ಅಗತ್ಯವಾಗಿ ಸರಬರಾಜು ಮಾಡಬೇಕು. ಜಾತ್ರೆ ಸುತ್ತಮುತ್ತಲಿನ ಪ್ರದೇಶ ಮತ್ತಿತರ ಸೌಲಭ್ಯವನ್ನು ಪಟ್ಟಣ ಪಂಚಾಯ್ತಿ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಮುಖ್ಯಾಧಿಕಾರಿ ಡಿ. ಭೂತಪ್ಪ ಅವರಿಗೆ ಸೂಚಿಸಿದರು.

ಜಾತ್ರೆ ನಡೆಯುವ ಪ್ರಮುಖ ಬೀದಿಗಳಲ್ಲಿ ರಸ್ತೆ ದುರಸ್ತಿ ಕಾರ್ಯ ಶೀಘ್ರವಾಗಿ ಮುಗಿಸಬೇಕು. ದೇವಸ್ಥಾನದ ಪ್ರಸಾದ ನೀಡುವ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಆಹಾರವನ್ನು ಪರೀಕ್ಷಿಸದೇ ಭಕ್ತಾದಿಗಳಿಗೆ ವಿತರಿಸುವಂತಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಜಾತ್ರೆ ಸಂದರ್ಭದಲ್ಲಿ ಹಾಕಲಾಗುವ ಅಂಗಡಿ ಹೋಟೆಲ್ ಮಳಿಗೆಗಳ ಜಾಗಕ್ಕೆ ಅನುಗುಣವಾಗಿ ಕರ ವಸೂಲಿ ಕಾರ್ಯವಾಗಬೇಕು ಅಥವಾ ಈ ಕಾರ್ಯವನ್ನು ಟೆಂಡರ್’ದಾರರಿಗೆ ವಹಿಸಿದ್ದರೆ ಇದರ ಸಂಪೂರ್ಣ ಹೊಣೆಗಾರರು ಟೆಂಡರ್’ದಾರರೇ ಆಗಿರುತ್ತಾರೆ ಎಂದರು.

ವಿದ್ಯುತ್ ಸರಬರಾಜು ವ್ಯವಸ್ಥೆ ಸಮರ್ಪಕಗೊಳಿಸುವ ಜೊತೆಯಲ್ಲಿ, ದೇವಸ್ಥಾನ ಸಮಿತಿ ಹಾಗೂ ಪಟ್ಟಣ ಪಂಚಾಯ್ತಿ ವತಿಯಿಂದ ಗ್ರಾಮದಲ್ಲಿ ಬೀದಿ ದೀಪಗಳ ನಿರ್ವಹಣೆಯಾಗಬೇಕು. ದೇವಸ್ಥಾನ ಸಮಿತಿಯಿಂದ ಹೈಮಾಸ್ಟ್‌ ದೀಪದ ವ್ಯವಸ್ಥೆ, ವಾಹನ ನಿಲುಗಡೆ ಸ್ಥಳಗಳಲ್ಲಿಯೂ ದೀಪದ ವ್ಯವಸ್ಥೆ ಮಾಡಬೇಕು. ಹೋಟೆಲ್ ಮತ್ತು ಅಂಗಡಿಗಳಲ್ಲಿ ಮಾರಾಟ ಆಹಾರ ಸುರಕ್ಷತಾ ನಿಯಮಗಳನ್ನು ಪಾಲನೆ ಮಾಡಿರಬೇಕು ಎಂದರು.


ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಿದ್ದಲ್ಲಿ ಟೆಂಡರ್’ದಾರರೆ ಸಂಪೂರ್ಣ ಹೊಣೆಗಾರರಾಗಿರುತ್ತಾರೆ. ಹಸಿ ಹಾಗೂ ಒಣ ಕಸ ಸಂಗ್ರಹಣಾ ಬುಟ್ಟಿಯನ್ನು ಟೆಂಡರ್’ದಾರರು ಪ್ರತಿ ಅಂಗಡಿ ಮಳಿಗೆಗಳಿಗೆ ವಿತರಿಸಬೇಕು. ತಪ್ಪಿದಲ್ಲಿ ಟೆಂಡರ್’ದಾರರನ್ನೇ ಹೊಣೆ ಮಾಡಿ ಸೂಕ್ತ ಕ್ರಮಕೈಗೊಳ್ಳಲಾಗುವುದು. ಮಳಿಗೆಯ ಮಾಲೀಕರು ಅಥವಾ ಟೆಂಡರ್’ದಾರರು ವಿದ್ಯುತ್ ಸಂಪರ್ಕ ಪಡೆಯಲು ತಾತ್ಕಾಲಿಕವಾಗಿ ಅನುಮತಿ ಪಡಯಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಬೆಸ್ಕಾಂ ಇಲಾಖೆ ಅಧಿಕಾರಿಗೆ ತಿಳಿಸಿದರು.

ಪ್ರಾಣಿಬಲಿ ನಿಷೇಧ
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಆವರಣ ಸೇರಿದಂತೆ ಸುತ್ತಲು 1 ಕಿಮೀ ದೂರದಲ್ಲಿ ಮಾಂಸಾಹಾರವನ್ನು ನಿಷೇಧಿಸಲಾಗುವುದು. ಪ್ರಾಣಿಬಲಿ ನಿಷೇಧ ಪ್ರಚಾರಕ್ಕಾಗಿ ಅಗತ್ಯವಾಗಿ ಬೇಕಾದ ಕರ ಪತ್ರ, ಬ್ಯಾನರ್’ಗಳನ್ನು ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಉಪವಿಭಾಗಾಧಿಕಾರಿ ವಿ. ಪ್ರಸನ್ನ ಮಾತನಾಡಿ, ಆರೋಗ್ಯ ಮತ್ತು ನೈರ್ಮಲ್ಯೀಕರಣ ದಿನಕ್ಕೆ ಮೂರು ಬಾರಿ ಸ್ವಚ್ಚತಾ ಕಾರ್ಯ ನಡೆಯಬೇಕು. ನೀರಿನ ಟ್ಯಾಂಕರ್’ಗಳ ಬಳಿ ಕಡ್ಡಾಯವಾಗಿ ಕಸದ ಸಂಗ್ರಹಣಾ ಬುಟ್ಟಿಯ ವ್ಯವಸ್ಥೆ ಮಾಡಬೇಕು ಹಾಗೂ ಪಟ್ಟಣದ ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚು ಕಸದ ಬುಟ್ಟಿಯ ವ್ಯವಸ್ಥೆ ಆಗಬೇಕು ಎಂದರು.

ಚಳ್ಳಕೆರೆ ಡಿವೈಎಸ್’ಪಿ ರೋಷನ್ ಜಮೀರ್ ಮಾತನಾಡಿ, ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 1500ಕ್ಕಿಂತ ಹೆಚ್ಚು ರಕ್ಷಣಾ ಸಿಬ್ಬಂದಿ, 100 ಜನ ಮಫ್ತಿ ಪೊಲೀಸರನ್ನು ನಿಯೋಜಿಸಲಾಗುತ್ತದೆ. ಕಳ್ಳತನ ಮತ್ತು ಜಾತ್ರೆಯಲ್ಲಿ ತಪ್ಪಿಸಿಕೊಂಡ ಮಕ್ಕಳ ಬಗ್ಗೆ ತುರ್ತು ಕ್ರಮಕೈಗೊಳ್ಳಲಾಗುವುದು. ಪ್ರಮುಖ ಸ್ಥಳಗಳಲ್ಲಿ ಕೌಂಟರ್ ವ್ಯವಸ್ಥೆ ಮಾಡಲಾಗುವುದು. ಜಾತ್ರೆಗೆ ವಿವಿಧ ಮಾರ್ಗಗಳಿಂದ ಬರುವ ರಸ್ತೆಗಳಲ್ಲಿ 7 ಕಡೆ ಚೆಕ್’ಪೋಸ್ಟ್‌’ಗಳನ್ನು ನಿರ್ಮಿಸಿ ಪ್ರಾಣಿಬಲಿ ನಿಷೇಧಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ಈ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ, ನಾಯಕನಹಟ್ಟಿ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಅಧ್ಯಕ್ಷ ರವಿಶಂಕರ್, ಚಳ್ಳಕೆರೆ ತಹಶೀಲ್ದಾರ್ ಎಂ. ಮಲ್ಲಿಕಾರ್ಜುನಯ್ಯ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

Tags: Bayalu Seeme NewsChallakereChitradurgaChitradurga DCGuru Tipperudra Swamy JaatreLatestNewsKannadaNayakana HattiVinoth Priya IASಗುರು ತಿಪ್ಪೇರುದ್ರಸ್ವಾಮಿ ಜಾತ್ರೆಚಳ್ಳಕೆರೆಜಿಲ್ಲಾಧಿಕಾರಿ ಆರ್. ವಿನೂತ್ ಪ್ರಿಯಾನಾಯಕನಹಟ್ಟಿ ಜಾತ್ರೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೈಂದೂರು: ಹೊಸೂರು-ಜಡ್ಕಲ್ ಧೂಳು ಮುಕ್ತ ರಸ್ತೆ ನಿರ್ಮಾಣಕ್ಕೆ ಚಾಲನೆ: ಶಾಸಕ-ಸಂಸದರಿಗೆ ಅಭಿನಂದನೆ

Next Post

ನಾಲ್ಕು ಉದರದ ರೋಮಾಂತಕ ಪ್ರಾಣಿ ದೇಶದ ಸಂಪತ್ತು

kalpa News

kalpa News

Next Post

ನಾಲ್ಕು ಉದರದ ರೋಮಾಂತಕ ಪ್ರಾಣಿ ದೇಶದ ಸಂಪತ್ತು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL