ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಜಿಲ್ಲಾ ಸಹಕಾರ ಯೂನಿಯನ್’ಗೆ ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷರಾದ ಮಾತೃಶ್ರೀ ಮಂಜುನಾಥ್ ಆಯ್ಕೆಯಾಗಿದ್ದಾರೆ.
ಇಂದು ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಚಳ್ಳಕೆರೆ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷರಾದ ಮಾತೃಶ್ರೀ ಮಂಜುನಾಥ ಮತ್ತು ಕೆಎಂಎಫ್ ರಾಜ್ಯ ನಿರ್ದೇಶಕರಾದ ಸಿ. ವೀರಭದ್ರಬಾಬು (ಸಿ.ಬಾಬು) ಸ್ಪರ್ಧಿಸಿದ್ದರು.
ಆಡಳಿತ ಮಂಡಳಿಯಲ್ಲಿ ಒಟ್ಟು 18 ಮತಗಳಿದ್ದು, ಅದರಲ್ಲಿ ಮಂಜುನಾಥ ಅವರು 10 ಮತಗಳು ಪಡೆದಿದ್ದು, 2 ಮತಗಳ ಅಂತರದಿಂದ ಬಾಬು ಅವರನ್ನು ಮಣಿಸಿ ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್‌ಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post