ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ದೇಶದ ಪ್ರಗತಿಗೆ ಶಿಕ್ಷಣವೇ ಆಧಾರ ಸ್ಥಂಭವಾಗಿದ್ದು ಅದನ್ನು ಪಡೆದ ವ್ಯಕ್ತಿಗಳು ದೇಶಕ್ಕಾಗಿ ವಿನಿಯೋಗಿಸಬೇಕು ಅಂದಾಗ ಮಾತ್ರ ಸರ್ಕಾರದ ಉದ್ದೇಶಗಳು ಈಡೇರಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿ ಕುಮಾರ್ ಹೇಳಿದರು.
ತಾಲೂಕಿನ ಚಿತ್ರನಾಯಕನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳ ಸಂಘ, ಖಾಸಗಿ ಚಾನಲ್ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಿದ್ದ 10 ನೆಯ ತರಗತಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣಾ ಕಾರ್ಯಕ್ರಮ ಮತ್ತು ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣದಿಂದ ಮಕ್ಕಳು ವಂಚಿತರಾದಲ್ಲಿ ಅದಕ್ಕಿಂತ ದೊಡ್ಡ ದುರಂತ ಬೇರೊಂದಿಲ್ಲ, ದೇಶದ ಪ್ರಗತಿಗೆ ಶಿಕ್ಷಣವೇ ಆಧಾರ ಸ್ಥಂಭವಾಗಿದ್ದು ಅದನ್ನು ಪಡೆದ ವ್ಯಕ್ತಿಗಳು ದೇಶಕ್ಕಾಗಿ ವಿನಿಯೋಗಿಸಬೇಕು ಅಂದಾಗ ಮಾತ್ರ ಸರ್ಕಾರದ ಉದ್ದೇಶಗಳು ಈಡೇರಲು ಸಾಧ್ಯ ಎಂದರು.
ನಿವೃತ್ತ ಶಿಕ್ಷಕ ಹನುಮಂತ ರೆಡ್ಡಿ ಮಾತನಾಡಿ, ಇತ್ತೀಚೆಗೆ ಶಿಕ್ಷಕ ವೃಂದಕ್ಕೆ ಗೌರವ ನೀಡುವ ಗುರುವಂದನೆ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುತ್ತಿದ್ದು ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಹೆಚ್ಚಿಸಿದೆ, ಜ್ಞಾನದ ಹಸಿವನ್ನು ತೀರಿಸಿ ಬದುಕನ್ನು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ. ಶೈಕ್ಷಣಿಕವಾಗಿ ವಿದ್ಯಾರ್ಥಿಗಳನ್ನು ಪ್ರಬುದ್ಧಗೊಳಿಸಿದ ಶಿಕ್ಷಕರ ಸೇವೆಯನ್ನು ಸ್ಮರಿಸುತ್ತಿರುವ ಕಾರ್ಯಕ್ರಮ ಅರ್ಥಪೂರ್ಣ ಎಂದರು.
ನೂತನ ಗ್ರಾಮ ಪಂಚಾಯ್ತಿ ಸದಸ್ಯ ಸಿ.ಡಿ. ನಾರಾಯಣ ರೆಡ್ಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗುರುಗಳ ಮೇಲಿನ ಗೌರವ ಕಡಿಮೆಯಾಗುತ್ತಿರುವುದು ಖೇದದ ಸಂಗತಿಯಾದರೇ, ಇನ್ನೊಂದೆಡೆ ಕೆಲವು ವಿದ್ಯಾರ್ಥಿಗಳು ಶಿಕ್ಷಣ ನೀಡಿದ ಗುರುಗಳನ್ನು ನೆನೆದು ಶಿಕ್ಷಕ ಗುರುವಂದನೆಯಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶಿಕ್ಷಕರ ಗೌರವವನ್ನು ಹೆಚ್ಚಿಸುವಂತೆ ಮಾಡಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್. ಸುರೇಶ್ ಮಾತನಾಡಿ, ಶಾಲೆಗಳಲ್ಲಿನ ಗಂಟೆಗಳ ಸದ್ದು ಹೆಚ್ಚು ಕೇಳುವ ದೇಶವು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರಲು ಸಾಧ್ಯ ಶಿಕ್ಷಣವಂತ ವಿದ್ಯಾರ್ಥಿಗಳು ವೇಷಭೂಷಣದ ಬದಲಾಗಿ ಉತ್ತಮ ಆದರ್ಶದಿಂದ ಸಮಾಜದಲ್ಲಿ ಗುರುತಿಸಿಕೊಳ್ಳುವ ಮೂಲಕ ಶಿಕ್ಷಕರ ಋಣವನ್ನು ತೀರಿಸಬೇಕಿದೆ ಎಂದು ಕರೆ ನೀಡಿದರು.
ಗುರು ಮತ್ತು ಶಿಷ್ಯರ ನಡುವೆ ಅವಿನಾಭಾವ ಸಂಬಂಧವಿದೆ. ಹೀಗಾಗಿ ಪುರಾಣ ಪುಣ್ಯಗಳ ಕಾಲದಿಂದಲೂ ಅದನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ವಿದ್ಯಾರ್ಥಿಗಳು ಗುರುವಂದನೆ ಸಲ್ಲಿಸುವ ಮೂಲಕ ಮತ್ತೊಂದು ವಿಶೇಷ ಅರ್ಥ ನೀಡುತ್ತಿರುವುದು ಸಂತಸದ ವಿಷಯ ಎಂದರು.
ನಿವೃತ್ತ ಶಿಕ್ಷಕರಾದ ವಾಸುದೇವ ರೆಡ್ಡಿ, ಭೀಮರೆಡ್ಡಿ, ಜಿ. ರುದ್ರಪ್ಪ, ವೆಂಕಟೇಶ ರೆಡ್ಡಿ, ಕಲ್ಲಪ್ಪ, ನಾರಾಯಣರೆಡ್ಡಿ, ತಿಪ್ಪೇರುದ್ರಪ್ಪ, ಶರಣಪ್ಪ, ಲೋಕೇಶ್ ರೆಡ್ಡಿ, ಎನ್.ವೈ. ನಳಿನಾಕ್ಷಿ, ಗರೀಬ್ ಸಾಬ್, ಸೇರಿದಂತೆ ಲಿಂಗೈಕ್ಯರಾದ ಶಿವಮೂರ್ತಿ ಮತ್ತು ನಾಗರಾಜ್ ರವರ ಕುಟುಂಬದವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾದ ಆರ್. ಪ್ರಶಾಂತ ಸಾಗರ್, ಶಿಕ್ಷಕರಾದ ಕೆ.ಟಿ. ವೇಲೂರು, ಬಿ. ಮಲ್ಲಿಕಾರ್ಜುನಪ್ಪ, ದ್ವಿತೀಯ ದರ್ಜೆ ಸಹಾಯಕರಾದ ಸುರೇಶ್, ಅತಿಥಿ ಶಿಕ್ಷಕರಾದ ಮಂಜುನಾಥ, ವೆಂಕಟೇಶ, ಭರತೇಶ್ ಸಹಾಯಕರಾದ ನಾಗಣ್ಣ, ತಿಪ್ಪೇಸ್ವಾಮಿ ಅವರನ್ನು ಗೌರವಿಸಲಾಯಿತು. ಶಾಲಾ ವತಿಯಿಂದ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಹಳೇ ವಿದ್ಯಾರ್ಥಿ ಶ್ರೀರಾಮ್ ರೆಡ್ಡಿ ಸ್ವಾಗತಿಸಿ, ಮೈಲನಹಳ್ಳಿ ದಿನೇಶ್ ನಿರೂಪಿಸಿದರು. ವೀರಣ್ಣ ರೆಡ್ಡಿ, ಬಸವರಾಜ್, ಹರೀಶ್, ವೀರಭದ್ರಪ್ಪ, ಅಂಬಿಕ, ರಘುವೀರ್ ಸೇರಿದಂತೆ ಹಳೇ ವಿದ್ಯಾರ್ಥಿಗಳು ಹಾಜರಿದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news






Discussion about this post