No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Thursday, August 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಉತ್ತಮ ಶಿಕ್ಷಿತರು ತಮ್ಮ ಜ್ಞಾನವನ್ನು ದೇಶಕ್ಕಾಗಿ ವಿನಿಯೋಗಿಸಬೇಕು: ರವಿಕುಮಾರ್ ಕರೆ

kalpa News by kalpa News
January 18, 2021
in Small Bytes, ಚಿತ್ರದುರ್ಗ
0
ಉತ್ತಮ ಶಿಕ್ಷಿತರು ತಮ್ಮ ಜ್ಞಾನವನ್ನು ದೇಶಕ್ಕಾಗಿ ವಿನಿಯೋಗಿಸಬೇಕು: ರವಿಕುಮಾರ್ ಕರೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ದೇಶದ ಪ್ರಗತಿಗೆ ಶಿಕ್ಷಣವೇ ಆಧಾರ ಸ್ಥಂಭವಾಗಿದ್ದು ಅದನ್ನು ಪಡೆದ ವ್ಯಕ್ತಿಗಳು ದೇಶಕ್ಕಾಗಿ ವಿನಿಯೋಗಿಸಬೇಕು ಅಂದಾಗ ಮಾತ್ರ ಸರ್ಕಾರದ ಉದ್ದೇಶಗಳು ಈಡೇರಲು ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿ ಕುಮಾರ್ ಹೇಳಿದರು.

ತಾಲೂಕಿನ ಚಿತ್ರನಾಯಕನಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳ ಸಂಘ, ಖಾಸಗಿ ಚಾನಲ್ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ಆಯೋಜಿಸಿದ್ದ 10 ನೆಯ ತರಗತಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಣಾ ಕಾರ್ಯಕ್ರಮ ಮತ್ತು ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣದಿಂದ ಮಕ್ಕಳು ವಂಚಿತರಾದಲ್ಲಿ ಅದಕ್ಕಿಂತ ದೊಡ್ಡ ದುರಂತ ಬೇರೊಂದಿಲ್ಲ, ದೇಶದ ಪ್ರಗತಿಗೆ ಶಿಕ್ಷಣವೇ ಆಧಾರ ಸ್ಥಂಭವಾಗಿದ್ದು ಅದನ್ನು ಪಡೆದ ವ್ಯಕ್ತಿಗಳು ದೇಶಕ್ಕಾಗಿ ವಿನಿಯೋಗಿಸಬೇಕು ಅಂದಾಗ ಮಾತ್ರ ಸರ್ಕಾರದ ಉದ್ದೇಶಗಳು ಈಡೇರಲು ಸಾಧ್ಯ ಎಂದರು.ಕೊರೊನ ಸಂಕಷ್ಟದಿಂದ ಮುಚ್ಚಿರುವ ಶಾಲೆಗಳಿಗೆ ಮಕ್ಕಳು ತೆರಳದೆ ಆನ್‌ಲೈನ್ ಕ್ಲಾಸ್‌ಗಳಿಂದ ಬಡ ಗ್ರಾಮೀಣ ಪ್ರದೇಶದ ಮಕ್ಕಳು ವಂಚಿತರಾಗಿದ್ದರು ಆದರೆ ಹಳೇ ವಿದ್ಯಾರ್ಥಿಗಳ ಸಂಘ ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಹಯೋಗದೊಂದಿಗೆ ಟ್ಯಾಬ್ ವಿತರಿಸುತ್ತಿರುವುದರಿಂದ ಕಲಿಕೆಗೆ ಪೂರಕವಾಗಿದೆ ಎಂದರು.

ನಿವೃತ್ತ ಶಿಕ್ಷಕ ಹನುಮಂತ ರೆಡ್ಡಿ ಮಾತನಾಡಿ, ಇತ್ತೀಚೆಗೆ ಶಿಕ್ಷಕ ವೃಂದಕ್ಕೆ ಗೌರವ ನೀಡುವ ಗುರುವಂದನೆ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುತ್ತಿದ್ದು ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಹೆಚ್ಚಿಸಿದೆ, ಜ್ಞಾನದ ಹಸಿವನ್ನು ತೀರಿಸಿ ಬದುಕನ್ನು ರೂಪಿಸುತ್ತಿರುವ ಶಿಕ್ಷಕರ ಸೇವೆ ಅವಿಸ್ಮರಣೀಯ. ಶೈಕ್ಷಣಿಕವಾಗಿ ವಿದ್ಯಾರ್ಥಿಗಳನ್ನು ಪ್ರಬುದ್ಧಗೊಳಿಸಿದ ಶಿಕ್ಷಕರ ಸೇವೆಯನ್ನು ಸ್ಮರಿಸುತ್ತಿರುವ ಕಾರ್ಯಕ್ರಮ ಅರ್ಥಪೂರ್ಣ ಎಂದರು.ಗ್ರಾಮೀಣ ಮಕ್ಕಳಿಗೆ ಕಲಿಕೆ ಅನುಕೂಲವಾಗಲಿದೆ. ಮುಂಬರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತುಂಬಾ ಉಪಯುಕ್ತವಾಗಲಿದೆ. ಆನ್‌ಲೈನ್ ಮೂಲಕ ಪಾಠ ಪ್ರವಚನಗಳು ಸಾಗಲಿ ಎಂಬ ದೃಢ ನಿರ್ಧರದಿಂದ ಇಂದು ಹಳೇ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಶಾಲಾ ಮಕ್ಕಳಿಗೆ ಟ್ಯಾಬ್ ನೀಡಲಾಗಿದೆ ಎಂದರು.

ನೂತನ ಗ್ರಾಮ ಪಂಚಾಯ್ತಿ ಸದಸ್ಯ ಸಿ.ಡಿ. ನಾರಾಯಣ ರೆಡ್ಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಗುರುಗಳ ಮೇಲಿನ ಗೌರವ ಕಡಿಮೆಯಾಗುತ್ತಿರುವುದು ಖೇದದ ಸಂಗತಿಯಾದರೇ, ಇನ್ನೊಂದೆಡೆ ಕೆಲವು ವಿದ್ಯಾರ್ಥಿಗಳು ಶಿಕ್ಷಣ ನೀಡಿದ ಗುರುಗಳನ್ನು ನೆನೆದು ಶಿಕ್ಷಕ ಗುರುವಂದನೆಯಂತಹ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಶಿಕ್ಷಕರ ಗೌರವವನ್ನು ಹೆಚ್ಚಿಸುವಂತೆ ಮಾಡಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್. ಸುರೇಶ್ ಮಾತನಾಡಿ, ಶಾಲೆಗಳಲ್ಲಿನ ಗಂಟೆಗಳ ಸದ್ದು ಹೆಚ್ಚು ಕೇಳುವ ದೇಶವು ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿರಲು ಸಾಧ್ಯ ಶಿಕ್ಷಣವಂತ ವಿದ್ಯಾರ್ಥಿಗಳು ವೇಷಭೂಷಣದ ಬದಲಾಗಿ ಉತ್ತಮ ಆದರ್ಶದಿಂದ ಸಮಾಜದಲ್ಲಿ ಗುರುತಿಸಿಕೊಳ್ಳುವ ಮೂಲಕ ಶಿಕ್ಷಕರ ಋಣವನ್ನು ತೀರಿಸಬೇಕಿದೆ ಎಂದು ಕರೆ ನೀಡಿದರು.

ಗುರು ಮತ್ತು ಶಿಷ್ಯರ ನಡುವೆ ಅವಿನಾಭಾವ ಸಂಬಂಧವಿದೆ. ಹೀಗಾಗಿ ಪುರಾಣ ಪುಣ್ಯಗಳ ಕಾಲದಿಂದಲೂ ಅದನ್ನು ವಿವಿಧ ರೀತಿಯಲ್ಲಿ ವಿಶ್ಲೇಷಿಸಲಾಗುತ್ತಿದೆ. ಇದಕ್ಕೆ ಪೂರಕವೆಂಬಂತೆ ಇತ್ತೀಚೆಗೆ ವಿದ್ಯಾರ್ಥಿಗಳು ಗುರುವಂದನೆ ಸಲ್ಲಿಸುವ ಮೂಲಕ ಮತ್ತೊಂದು ವಿಶೇಷ ಅರ್ಥ ನೀಡುತ್ತಿರುವುದು ಸಂತಸದ ವಿಷಯ ಎಂದರು.ಹಳೇ ವಿದ್ಯಾರ್ಥಿಗಳು ಆಸಕ್ತಿ ವಹಿಸಿ ಮಕ್ಕಳಿಗೆ ಶಿಕ್ಷಣಕ್ಕೆ ಅನುಕೂಲವಾಗುವಂತೆ ಉಚಿತವಾಗಿ ಟ್ಯಾಬ್ ವಿತರಣೆ ಮಾಡುತ್ತಿರುವುದು ಶಾಘ್ಲನೀಯ ಎಂದರು.
ನಿವೃತ್ತ ಶಿಕ್ಷಕರಾದ ವಾಸುದೇವ ರೆಡ್ಡಿ, ಭೀಮರೆಡ್ಡಿ, ಜಿ. ರುದ್ರಪ್ಪ, ವೆಂಕಟೇಶ ರೆಡ್ಡಿ, ಕಲ್ಲಪ್ಪ, ನಾರಾಯಣರೆಡ್ಡಿ, ತಿಪ್ಪೇರುದ್ರಪ್ಪ, ಶರಣಪ್ಪ, ಲೋಕೇಶ್ ರೆಡ್ಡಿ, ಎನ್.ವೈ. ನಳಿನಾಕ್ಷಿ, ಗರೀಬ್ ಸಾಬ್, ಸೇರಿದಂತೆ ಲಿಂಗೈಕ್ಯರಾದ ಶಿವಮೂರ್ತಿ ಮತ್ತು ನಾಗರಾಜ್ ರವರ ಕುಟುಂಬದವರನ್ನು ಸನ್ಮಾನಿಸಿ, ಗೌರವಿಸಲಾಯಿತು.

ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕರಾದ ಆರ್. ಪ್ರಶಾಂತ ಸಾಗರ್, ಶಿಕ್ಷಕರಾದ ಕೆ.ಟಿ. ವೇಲೂರು, ಬಿ. ಮಲ್ಲಿಕಾರ್ಜುನಪ್ಪ, ದ್ವಿತೀಯ ದರ್ಜೆ ಸಹಾಯಕರಾದ ಸುರೇಶ್, ಅತಿಥಿ ಶಿಕ್ಷಕರಾದ ಮಂಜುನಾಥ, ವೆಂಕಟೇಶ, ಭರತೇಶ್ ಸಹಾಯಕರಾದ ನಾಗಣ್ಣ, ತಿಪ್ಪೇಸ್ವಾಮಿ ಅವರನ್ನು ಗೌರವಿಸಲಾಯಿತು. ಶಾಲಾ ವತಿಯಿಂದ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಹಳೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು. ಹಳೇ ವಿದ್ಯಾರ್ಥಿ ಶ್ರೀರಾಮ್ ರೆಡ್ಡಿ ಸ್ವಾಗತಿಸಿ, ಮೈಲನಹಳ್ಳಿ ದಿನೇಶ್ ನಿರೂಪಿಸಿದರು. ವೀರಣ್ಣ ರೆಡ್ಡಿ, ಬಸವರಾಜ್, ಹರೀಶ್, ವೀರಭದ್ರಪ್ಪ, ಅಂಬಿಕ, ರಘುವೀರ್ ಸೇರಿದಂತೆ ಹಳೇ ವಿದ್ಯಾರ್ಥಿಗಳು ಹಾಜರಿದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsChallakereChitradurgaKannada News WebsiteLatest News Kannadaಚಳ್ಳಕೆರೆಚಿತ್ರದುರ್ಗಬಯಲು ಸೀಮೆ ಸುದ್ಧಿ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ನೀಡುವುದು ಮುಖ್ಯ: ಶಾಸಕ ಸಂಗಮೇಶ್ವರ ಕರೆ

Next Post

ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರಿಗೆ ಭೈರವಿ ರೈತ ಮಹಿಳೆ ಪ್ರಶಸ್ತಿ

kalpa News

kalpa News

Next Post
ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರಿಗೆ ಭೈರವಿ ರೈತ ಮಹಿಳೆ ಪ್ರಶಸ್ತಿ

ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರಿಗೆ ಭೈರವಿ ರೈತ ಮಹಿಳೆ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL