ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಇದು ಕೊನೆ ಸಾಮಾನ್ಯ ಸಭೆಯಾಗಿದ್ದು, ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುತ್ತದೆ ಎಂದು ತಾಪಂ ಅಧ್ಯಕ್ಷ ತಿಪ್ಪೇಸ್ವಾಮಿ ಹೇಳಿದರು.
ಇಂದು ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಸಭೆಗೆ ಹಾಜರಾಗದೆ ನಿರ್ಲಕ್ಷ್ಯ ಧೋರಣೆ ತೋರಿರುವುದರಿಂದ ನೋಟಿಸ್ ನೀಡಲಾಗುವುದು ಎಂದರು.
ಸದಸ್ಯ ತಿಮ್ಮಾರೆಡ್ಡಿ ಮಾತನಾಡಿ, ಗ್ರಾಮ ಪಂಚಾಯತಿಗಳಲ್ಲಿ 14ನೇ ಹಣಕಾಸು ಯೋಜನೆಯಲ್ಲಿ ಅವ್ಯವಹಾರ ಆಗಿದೆ. ಆದ್ದರಿಂದ ಸೂಕ್ತ ತನಿಖೆ ನಡೆಯಬೇಕು ಎಂದು ಮನವಿ ಮಾಡಿದರು.
ಇಒ ಅನಂತರಾಜ್ ಮಾತನಾಡಿ, ಮುಖ್ಯ ಕಾರ್ಯದರ್ಶಿಗೆ ಸಭೆಯ ನಡವಳಿ ಬಗ್ಗೆ ಪತ್ರ ಬರೆದು ತನಿಖೆಗೆ ಶಿಪಾರಸ್ಸು ಮಾಡಲಾಗುತ್ತದೆ ಎಂದರು.
ತೋಟಗಾರಿಕೆ ಅಧಿಕಾರಿ ವಿರೂಪಾಕ್ಷಪ್ಪ ಮಾತನಾಡಿ, ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅಡಕೆ, ದಾಳಿಂಬೆ ಬೆಳೆಗೆ ಹಾಗೂ ಹೊಸದಾಗಿ ತೋಟ ಮಾಡಲು ಸಹಾಯಧನ ನೀಡಲಾಗುತ್ತದೆ. 2019-20ನೇ ಸಾಲಿನಲ್ಲಿ ದಾಳಿಂಬೆ, ಅಡಕೆ, ಮಾವು ಬೆಳೆಗೆ 2 ಕೊಟಿ 75ಲಕ್ಷ ಮೊತ್ತದ ವಿಮೆ ತಾಲೂಕಿನ ರೈತರಿಗೆ ಬಂದಿದೆ ಎಂದು ವರದಿ ನೀಡಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಇಲಾಖೆಯ ಇಂಜಿನಿಯರ್ ಉಮೇಶ್ ಸಭೆಗೆ ಅಪೂರ್ಣ ಮಾಹಿತಿ ನೀಡಿದ ಕಾರಣ ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್. ಸಮರ್ಥರಾಯ್ ಮಾತನಾಡಿ, ಸಮರ್ಪಕ ಮಾಹಿತಿ ಇಲ್ಲದೆ ಸಭೆಗೆ ಬರುವುದು ಸರಿಯಲ್ಲ ಎಂದು ಕಿಡಿಕಾರಿದರು.

ಬಿಸಿಎಂ ಅಧಿಕಾರಿ ಜಗನ್ನಾಥ್ ಮಾತನಾಡಿ, ಕೊವಿಡ್‌ನಿಂದ ಮಕ್ಕಳ ಸುರಕ್ಷತೆಗೆ ಸೂಕ್ತ ಕ್ರಮ ವಹಿಸಲಾಗಿದೆ. ತಾಲೂಕಿನಲ್ಲಿ ವಿದ್ಯಾರ್ಥಿ ವೇತನ ಇತ್ಯಾದಿ ಬಗ್ಗೆ ಕ್ರಮವಹಿಸಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post