ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಮುಂದಿನ ತಿಂಗಳು ನಡೆಯುವ ವಾಲ್ಮೀಕಿ ಜಾತ್ರೆಗೆ ನಾಯಕ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಾಜನಹಳ್ಳಿ ಶ್ರೀವಾಲ್ಮೀಕಿ ಗುರುಪೀಠದ ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಕರೆ ನೀಡಿದರು.
ತಾಲೂಕಿನ ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವ ಕುರಿತು ಸೋಮವಾರ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ವಾಲ್ಮೀಕಿ ಜಾತ್ರೆ ನಿಮ್ಮ ಜಾತ್ರೆ, ನಿಮ್ಮ ಜಾತ್ರೆಗೆ ನೀವೆಲ್ಲಾ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾಜದ ಬೇಡಿಕೆಗಳ ಈಡೇರಿಕೆಗಾಗಿ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡೋಣ ಎಂದು ಕರೆ ನೀಡಿದರು.
ಚಳ್ಳಕೆರೆ ತಹಶೀಲ್ದಾರ್ ಎನ್. ರಘುಮೂರ್ತಿ, ವಾಲ್ಮೀಕಿ ಸಂಘದ ಅಧ್ಯಕ್ಷ ಮಲ್ಲಪ್ಪ ನಾಯಕ, ಮುಖಂಡರಾದ ಬಾಳೆಕಾಯಿ ರಾಮದಾಸ್, ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಟಿ. ತಿಪ್ಪೇಸ್ವಾಮಿ, ನಗರಸಭೆ ಸದಸ್ಯರಾದ ಕವಿತ ಬೋರಣ್ಣ, ಸುಮಕ್ಕ ಭರಮಣ್ಣ, ಎಲ್‌ಐಸಿ ತಿಪ್ಪೇಸ್ವಾಮಿ, ವಾಲ್ಮೀಕಿ ಮಹಾಸಭೆ ಅಧ್ಯಕ್ಷೆ ಸೌಭಾಗ್ಯಮ್ಮ, ನಾಟಕ ಅಕಾಡೆಮಿ ಮಾಜಿ ಸದಸ್ಯೆ ಟಿ. ತಿಪ್ಪೇಸ್ವಾಮಿ, ಯಶೋದಮ್ಮ, ಎಇಇ ರಾಜು, ಚಳ್ಳಕೆರೆ ತಾಲೂಕು ಕಸಾಪ ಅಧ್ಯಕ್ಷ ವೀರಭದ್ರಯ್ಯ ಹಾಗೂ ಸಮುದಾಯದ ಮುಖಂಡರು ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post