ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ/ನಾಯಕನಹಟ್ಟಿ |
ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಯಲ್ಲಿ ಸಂಪೂರ್ಣವಾಗಿ ಪ್ರಾಣಿ ಬಲಿ ನಿಷೇಧಿಸಲಾಗಿದೆ ಎಂದು ಪಿಎ ಮಹೇಶ್ ಲಕ್ಷ್ಮಣ ಹೊಸಪೇಟೆ ಅವರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.
ಮಾ.20ರಂದು ನಾಯಕನಹಟ್ಟಿ ಶ್ರೀಗುರು ತಿಪ್ಪೇರುದ್ರಸ್ವಾಮಿ ಜಾತ್ರೆ ರಥೋತ್ಸವದ ನಡೆಯಲಿದ್ದು, ಜಾತ್ರೆಯಲ್ಲಿ ಕುರಿ, ಕೋಳಿ, ಮೇಕೆ ಅಥವಾ ಇನ್ನಿತರ ಪ್ರಾಣಿಗಳನ್ನು ಬಲಿ ಕೊಡುವಂತಿಲ್ಲ ಎಂದು ತಿಳಿಸಿದರು.

ಪ್ರಾಣಿಬಲಿ ನಿಷೇಧ ಕಾಯ್ದೆ ಅನ್ವಯ ಕಾನೂನು ಉಲ್ಲಂಘನೆ ಮಾಡಿದವರ ಮೇಲೆ ಕ್ರಮ ಜರುಗಿಸಲು ರಾಜ್ಯ ಹೈಕೋರ್ಟ್ ಆದೇಶ ನೀಡಿದೆ ಎಂದು ತಿಳುವಳಿಕೆ ಹೇಳಿದರು.
Also read: ಶಿರಸಿ ಮಾರಿಕಾಂಬಾ ಜಾತ್ರೆಗೆ ಇಂದು ರಾತ್ರಿ ಅಧಿಕೃತ ಚಾಲನೆ: ಎಷ್ಟು ದಿನ, ಏನೆಲ್ಲಾ ಆಚರಣೆ ನಡೆಯಲಿವೆ?

ಈ ಸಂದರ್ಭದಲ್ಲಿ ಎ ಎಸ್ ಐ ತಿಪ್ಪೇಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















