ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ರಾಮಾಯಣ ಕಾವ್ಯದಲ್ಲಿ ಸಾಮಾಜಿಕ ಮೌಲ್ಯಗಳಿವೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿಯನ್ನು ಮುಂದೂಡುತ್ತಿರುವ ಸರ್ಕಾರ ಸಮುದಾಯದ ಜನರಿಗೆ ಮೋಸ ಮಾಡುತ್ತಿದೆ. ಹಾಗಾಗಿ ಜಾತಿ ಜನಸಂಖ್ಯೆಯ ಆಧಾರದ ಮೇಲೆ ಮೀಸಲಾತಿ ಪಡೆಯಲು ಹೋರಾಟವನ್ನು ಮಾಡಬೇಕು ಎಂದು ಹೇಳಿದರು.
ತಹಶೀಲ್ದಾರ್ ಎನ್. ರಘುಮೂರ್ತಿ ಮಾತನಾಡಿ ವಾಲ್ಮೀಕಿ ರಾಮಾಯಣ ಕೃತಿಯನ್ನು ಮಕ್ಕಳಿಗೆ ತಪ್ಪದೇ ಮನನ ಮಾಡಿಸಬೇಕು ಎಂದು ಹೇಳಿದರು.
ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ, ಸದಸ್ಯೆ ಕವಿತಾ ಬೋರಣ್ಣ ಮಾತನಾಡಿದರು. ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್‌ಗೌಡ, ಸದಸ್ಯೆ ಸುಮಾ, ಕವಿತಾ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಲುವೆಹಳ್ಳಿ ಜಯಪಾಲಯ್ಯ, ವಾಲ್ಮೀಕಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಜಿ.ಟಿ. ವೀರಭದ್ರಸ್ವಾಮಿ, ಶಿಕ್ಷಕರ ಸಂಘದ ರಾಜ್ಯ ಕಾರ್‍ಯಕಾರಿಣಿ ಸದಸ್ಯ ಮಾರುತೇಶ್, ವಾಲ್ಮೀಕಿ ಸಮುದಾಯದ ಮುಖಂಡ ಹಟ್ಟಿಮಲ್ಲಪ್ಪನಾಯಕ, ಪಿ. ತಿಪ್ಪೇಸ್ವಾಮಿ, ರಾಜಣ್ಣ, ಡಿ.ಕೆ. ಕಾಟಯ್ಯ, ಸಿ.ಟಿ. ಶ್ರೀನಿವಾಸ್, ಕೆ.ಟಿ. ಕುಮಾರಸ್ವಾಮಿ, ದಳವಾಯಿಮೂರ್ತಿ, ಸೂರನಾಯಕ, ನಾಗರಾಜ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್, ಸದಾನಂದ, ಸಿ.ಟಿ. ವೀರೇಶ್ ಇದ್ದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post