ಚಳ್ಳಕೆರೆ: ಇಲ್ಲಿಗೆ ಸಮೀಪ ನಿನ್ನೆ ಓಮ್ನಿ ಹಾಗೂ ಬೊಲೆರೋ ಪರಸ್ಪರ ಮುಖಾಮುಖಿ ಡಿಕ್ಕಿಯಾಗಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಾಲೂಕಿನ ಬುಕ್ಲೋರಹಳ್ಳಿ ಬಳಿ ಈ ಘಟನೆ ನಡೆದಿದ್ದು, ಚಿಕ್ಕಹಳ್ಳಿಯ ಅಶ್ವತ್ ರೆಡ್ಡಿ (32) ಮತ್ತು ಪ್ರಶಾಂತ್ ರೆಡ್ಡಿ (25) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಗಳು. ವಾಹನದಲ್ಲಿದ್ದ ವಿನಯ್ ಮತ್ತು ಮಹೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಬೊಲೆರೋ ಚಾಲಕನ ಅಜಾಗರೂಕತೆ ಕಾರಣ ಎಂದು ತಿಳಿದಿದೆ. ಘಟನಾ ಸ್ಥಳಕ್ಕೆ ತಳಕು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get In Touch With Us info@kalpa.news Whatsapp: 9481252093, 94487 22200
Discussion about this post