ಕಲ್ಪ ಮೀಡಿಯಾ ಹೌಸ್ | ಚಳ್ಳಕೆರೆ |
ಜಲಾನಯನ ಪ್ರದೇಶದ ಮಾದರಿಯಲ್ಲಿ ಅಂತರ್ಜಲ ಚೇತನ ಯೋಜನೆಯನ್ನು ತಾಲೂಕಿನಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಹನುಮಂತಪ್ಪ ಹೇಳಿದರು.
ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಅಂತರ್ಜಲ ಚೇತನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
Also read: ‘ಅರೋರ – 2022’: ಜೆಎನ್‌ಎನ್‌ಸಿ ಕಾಲೇಜು ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್
ಮಳೆಯ ಏರಿಳಿತ ಇರುವ ಪ್ರದೇಶದಲ್ಲಿ ಕೃಷಿ ಚಟವಟಿಕೆ ತೀರಾ ಕುಂಠಿತಗೊಳ್ಳುತ್ತಿದೆ. ಹೀಗಾಗಿ ಗ್ರಾಮ ಪಂಚಾಯಿತಿಯಲ್ಲಿ ತಯಾರಿಸಿರುವ ಅಂತರ್ಜಲ ಚೇತನ ಕ್ರಿಯಾಯೋಜನೆಯಲ್ಲಿ ಶೇಕಡ ೬೬ ರಷ್ಟು ನರೇಗಾ ಯೋಜನೆಯಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ವರದಿ: ಸುರೇಶ್ ಬೆಳಗೆರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post