ಕಲ್ಪ ಮೀಡಿಯಾ ಹೌಸ್
ಚಳ್ಳಕೆರೆ: ಮದ್ಯ, ಗುಟ್ಕಾ ಮುಂತಾದ ಹವ್ಯಾಸದಿಂದ ಆರೋಗ್ಯ ಹದಗೆಡುತ್ತದೆ ಆದ್ದರಿಂದ ಯುವಜನತೆ ದುಶ್ಚಟಗಳಿಂದ ದೂರ ಇರಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಬೆಂಗಳೂರು ಸಂಕಲ್ಪ ಚೇಸ್ ಕ್ಯಾನ್ಸರ್ ಫೌಂಡೇಶನ್ ಟ್ರಸ್ಟ್ ಆಶ್ರಯದಲ್ಲಿ ನಗರದ ಎಸ್.ಆರ್. ಕಾಂಪ್ಲೆಕ್ಸ್‌ನಲ್ಲಿ ಆಯೋಜಿಸಿದ್ದ ಕ್ಯಾನ್ಸ್‌ರ್ ಉಚಿತ ತಪಾಸಣೆ ಹಾಗೂ ಸಲಹಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದುಶ್ಚಟಗಳಿಂದ ದೂರವಿದ್ದು ಉತ್ತಮ ಬದುಕನ್ನು ಕಟ್ಟಿಕೊಳ್ಳುವುದರ ಮೂಲಕ ಸಮಾಜದಲ್ಲಿ ಮಾದರಿಯಾಗಬೇಕು ಎಂದು ಯುವಜನರಿಗೆ ಕಿವಿ ಮಾತು ಹೇಳಿದರು.
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಈ ಭಾಗದ ಜನರು, ಕ್ಯಾನ್ಸರ್ ತಪಾಸಣೆಗೆ ಬೆಂಗಳೂರು ಹಾಗೂ ಹುಬ್ಬಳ್ಳಿಗೆ ತೆರಳಬೇಕು. ತಾಲೂಕಿನಲ್ಲಿ ತಪಾಸಣಾ ಶಿಬಿರ ಆಯೋಜಿಸಿರುವುದರಿಂದ ಸ್ಥಳೀಯರಿಗೆ ಅನುಕೂಲವಾಗಿದೆ ಎಂದು ಹೇಳಿದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















