ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ |
ಹಾರ್ಟ್ ಫೇಲ್ಯೂರ್(ಹೃದಯಸ್ತಂಭನ)ದಿಂದಾಗಿ #Heart failure 3ನೇ ತರಗತಿ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಖಾಸಗಿ ಶಾಲೆಯಲ್ಲಿ ಮೂರನೇ ತರಗತಿ ಓದುತ್ತಿದ್ದ ತೇಜಸ್ವಿನಿ (9)ಯನ್ನುಮೃತ ಬಾಲಕಿ #3Std girl death ಎಂದು ಗುರುತಿಸಲಾಗಿದೆ.
ಎಂದಿನಂತೆ ಶಾಲೆಗೆ ಹೋಗಿದ್ದ ಬಾಲಕಿ ತರಗತಿಗೆ ನಡೆದುಕೊಂಡು ಹೋಗುವಾಗ ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೊರಟು, ಬಾಲಕಿಯ ಪೋಷಕರಿಗೆ ವಿಷಯ ತಿಳಿಸಲಾಯಿತು.
Also read: ಶಿವಮೊಗ್ಗ | ಕೆ.ಎಸ್. ಈಶ್ವರಪ್ಪನವರ ನಿವಾಸಕ್ಕೆ ನಟ ಡಾಲಿ ಧನಂಜಯ ಭೇಟಿ
ಆದರೆ, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬಾಲಕಿಯನ್ನು ಪರೀಕ್ಷಿಸಿದ ವೈದ್ಯರು ಹಾರ್ಟ್ ಫೇಲ್ಯೂರ್’ನಿಂದಾಗಿ ಆಕೆ ಸಾವಿಗೀಡಾಗಿದ್ದಾಳೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಬಾಲಕಿಯ ಪೋಷಕರು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post