No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Wednesday, October 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಚಾಮರಾಜನಗರ | ಮದಕರಿ ನಾಯಕರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ: ಸುರೇಶ್ ಋಗ್ವೇದಿ

kalpa News by kalpa News
October 14, 2026
in News, ಚಾಮರಾಜನಗರ
0
chamarajanagar madakari nayaka suresh rigvedi
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಕನ್ನಡಿಗರ ಸ್ವಾಭಿಮಾನ, ಧೈರ್ಯ, ತ್ಯಾಗ ಹಾಗೂ ಅಪ್ರತಿಮ ವೀರತ್ವದ ಸಂಕೇತ ಚಿತ್ರದುರ್ಗದ ವೀರ ಮದಕರಿ ನಾಯಕರು. ಧರ್ಮ ಮತ್ತು ನಾಡಿಗಾಗಿ ತಮ್ಮ ಜೀವನವನ್ನೇ ಸಮರ್ಪಿಸಿ ಅಮರತ್ವ ಪಡೆದಿರುವ ವೀರ ಮದಕರಿ ನಾಯಕರನ್ನು (Veera Madakari) ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಉಪನ್ಯಾಸಕ ಸುರೇಶ್ ಎನ್. ಋಗ್ವೇದಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ ಸಭಾಂಗಣದಲ್ಲಿ ಚಾಮರಾಜನಗರ (Chamarajanagar) ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ‘ಚಿತ್ರದುರ್ಗದ ವೀರ ರಾಜ ಮದಕರಿ ನಾಯಕರ ಕೊಡುಗೆಗಳು’ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮದಕರಿ ನಾಯಕರ ಇತಿಹಾಸ ಮರೆಯಲಾಗದು

ಮದಕರಿ ನಾಯಕರು ಚಿತ್ರದುರ್ಗದ ಅಪ್ರತಿಮ ರಾಜರಾಗಿದ್ದರು. ಚಿತ್ರದುರ್ಗದ ಕೋಟೆಯನ್ನು ವಶಪಡಿಸಿಕೊಳ್ಳಲು ಹೈದರಾಲಿ ನಡೆಸಿದ ಪ್ರಯತ್ನಗಳು ಹಾಗೂ ಮದಕರಿ ನಾಯಕರ ಜೀವನದ ಘಟನೆಗಳನ್ನು ಕನ್ನಡಿಗರು ಮರೆಯಲು ಸಾಧ್ಯವಿಲ್ಲ. ಚಿತ್ರದುರ್ಗದ ವಿಶೇಷತೆ, ಮದಕರಿ ನಾಯಕರ ಇತಿಹಾಸ ಹಾಗೂ ಒನಕೆ ಓಬವ್ವ ಅವರ ಸಾಹಸಗಾಥೆ ಕನ್ನಡ ಸಾಹಿತ್ಯ ಮತ್ತು ಚಲನಚಿತ್ರಗಳಲ್ಲಿಯೂ ವಿಶೇಷ ಸ್ಥಾನ ಪಡೆದಿದೆ ಎಂದು ಸುರೇಶ್ ಋಗ್ವೇದಿ ಹೇಳಿದರು.

ತ.ರಾ.ಸು. ಅವರು ತಮ್ಮ ‘ದುರ್ಗಾಸ್ತಮಾನ’ ಕಾದಂಬರಿಯಲ್ಲಿ ಚಿತ್ರದುರ್ಗದ ಇತಿಹಾಸವನ್ನು ಪರಿಣಾಮಕಾರಿಯಾಗಿ ಕಟ್ಟಿಕೊಟ್ಟಿದ್ದಾರೆ. ಕನ್ನಡ ಚಲನಚಿತ್ರಗಳ ಮೂಲಕವೂ ಚಿತ್ರದುರ್ಗದ ಕೋಟೆ, ಮದಕರಿ ನಾಯಕರು ಹಾಗೂ ಒನಕೆ ಓಬವ್ವ ಅವರ ವೀರಗಾಥೆ ಕನ್ನಡಿಗರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದೆ ಎಂದರು.

ವೀರ ಮದಕರಿ ನಾಯಕರ ಇತಿಹಾಸ, ಸ್ವಾಭಿಮಾನ, ಧೈರ್ಯ ಮತ್ತು ಸಾಹಸ ಇಂದಿನ ಪೀಳಿಗೆಗೆ ಪ್ರೇರಣೆಯಾಗಬೇಕು. ನಾಡು ಮತ್ತು ಧರ್ಮಕ್ಕಾಗಿ ತಮ್ಮ ಉಸಿರನ್ನೇ ಸಮರ್ಪಿಸಿದ ಅವರನ್ನು ಪ್ರತಿಯೊಬ್ಬರೂ ಸ್ಮರಿಸುವ ಮೂಲಕ ದೇಶಪ್ರೇಮದ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

Shivamogga Dasara 2026 Page 38

ಕನ್ನಡ ನಾಡಿನ ಹೆಮ್ಮೆಯ ನಾಯಕ

ಮುಖಂಡ ಹಾಗೂ ಜನಪದ ಗಾಯಕ ಸುರೇಶ್ ನಾಗ್ ಹರದನಹಳ್ಳಿ ಅವರು ವೀರ ಮದಕರಿ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿ, ಮದಕರಿ ನಾಯಕರು ಕನ್ನಡ ನಾಡಿನ ಹೆಮ್ಮೆಯ ನಾಯಕರು. ತಮ್ಮ ರಾಜ್ಯದ ರಕ್ಷಣೆ, ಜನರ ಸಂರಕ್ಷಣೆ ಹಾಗೂ ಸ್ವಾಭಿಮಾನಕ್ಕಾಗಿ ಜೀವನವನ್ನೇ ಸಮರ್ಪಿಸಿದ ಇತಿಹಾಸದ ಶ್ರೇಷ್ಠ ವ್ಯಕ್ತಿ ಎಂದು ಬಣ್ಣಿಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಮದಕರಿ ನಾಯಕರ ಜಯಂತಿ ಹಾಗೂ ಅವರ ಕೊಡುಗೆಗಳ ಕುರಿತು ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ. ಕನ್ನಡ ಸಾಹಿತ್ಯ ಪರಿಷತ್ತು ಪ್ರತಿಯೊಂದು ಕಾರ್ಯಕ್ರಮವನ್ನೂ ಸರಳ ಹಾಗೂ ಅಚ್ಚುಕಟ್ಟಾಗಿ ರೂಪಿಸಿ ಸಮಾಜಕ್ಕೆ ಅರ್ಪಿಸುತ್ತಿರುವುದು ಮಾದರಿಯಾಗಿದೆ ಎಂದು ಹೇಳಿ, ಅಧ್ಯಕ್ಷ ಸುರೇಶ್ ಋಗ್ವೇದಿ ಅವರನ್ನು ಅಭಿನಂದಿಸಿದರು.

Chamarajanagar: ದೇಶಪ್ರೇಮದ ಗೀತೆಗಳ ಗಾಯನ

ಸುರೇಶ್ ನಾಗ್ ಹರದನಹಳ್ಳಿ ಅವರು ವೀರ ಮದಕರಿ ನಾಯಕರ ಇತಿಹಾಸ ಹಾಗೂ ಚಿತ್ರದುರ್ಗದ ಕೋಟೆಯ ವಿಶೇಷತೆಯನ್ನು ಸಾರುವ ಗೀತೆಗಳನ್ನು ಹಾಡಿ ಸಭಿಕರಲ್ಲಿ ದೇಶಪ್ರೇಮದ ಭಾವನೆ ಮೂಡಿಸಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯ ಹಾಗೂ ಜನಪದ ಗಾಯಕ ರವಿಚಂದ್ರ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ಮದಕರಿ ನಾಯಕರ ಜೀವನ ಮತ್ತು ಇತಿಹಾಸವನ್ನು ಪರಿಚಯಿಸಿದರು.

Also Read>> ಪ್ರೀತಿಯಿರುವಲ್ಲಿ ಮಾತ್ರ ಮನಸ್ಸಿನ ಸ್ಥಿರತೆ ಸಾಧ್ಯ: ರಾಘವೇಶ್ವರ ಶ್ರೀ

ಕನ್ನಡ ಸಾಹಿತ್ಯ ಪರಿಷತ್ತು ನಾಡು, ನುಡಿ, ಜಲ, ಭಾಷೆ ಹಾಗೂ ಸಾಹಿತ್ಯಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ನೂರಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಕನ್ನಡದ ಹಿರಿಮೆ ಮತ್ತು ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ಮಾಡುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಶಿವಲಿಂಗ ಮೂರ್ತಿ, ಬಿ.ಕೆ. ಆರಾಧ್ಯ, ಶಿಕ್ಷಕಿ ಸರಸ್ವತಿ ಪದ್ಮಾಪುರುಷೋತ್ತಮ್, ಶಿಕ್ಷಕಿ ಮಾಲಿನಿ, ಆಲೂರು ರಮೇಶ್ ಜೈರಾಮ್, ಸುರೇಶ್ ದೊಡ್ಡಮೋಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕನ್ನಡ ನಾಡು-ನುಡಿ, ಜಲ, ಭಾಷೆ ಹಾಗೂ ಕನ್ನಡ ಚಲನಚಿತ್ರಗಳ ದೇಶಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Shivamogga DasaraShivamogga Dasara 2026 Page 32

Christ King

 

 

PES ShivamoggaKalpa News Advertising Disclaimer

Tags: Chamarajanagarಕನ್ನಡ ಸಾಹಿತ್ಯ ಪರಿಷತ್ತುಚಾಮರಾಜನಗರವೀರ ಮದಕರಿ ನಾಯಕ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರೀತಿಯಿರುವಲ್ಲಿ ಮಾತ್ರ ಮನಸ್ಸಿನ ಸ್ಥಿರತೆ ಸಾಧ್ಯ: ರಾಘವೇಶ್ವರ ಶ್ರೀ

kalpa News

kalpa News

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL