No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Thursday, February 19, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಚನ್ನವೀರ ಕಣವಿಯವರು ಸಮನ್ವಯ ಸಾಹಿತ್ಯದ ಶ್ರೇಷ್ಠ ರಚನಾಕಾರರು: ಸುರೇಶ್ ಋಗ್ವೇದಿ

ಡಾ. ಚನ್ನವೀರ ಕಣವಿ ಹಾಗೂ ಡಾ.ಸಿದ್ದಲಿಂಗಯ್ಯನವರ ಸಾಹಿತ್ಯ ಕೊಡುಗೆಗಳ ಕುರಿತು ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 19, 2026
in ಚಾಮರಾಜನಗರ
0
ಚನ್ನವೀರ ಕಣವಿಯವರು ಸಮನ್ವಯ ಸಾಹಿತ್ಯದ ಶ್ರೇಷ್ಠ ರಚನಾಕಾರರು: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಸುನೀತಾ (ಸಾನೆಟ್ )ಕವಿತೆಗಳ ರಚನೆಯಲ್ಲಿ ತೊಡಗಿರುವ ಯುವಕವಿಗಳಿಗೆ ಚೆನ್ನವೀರ ಕಣವಿಯವರ ಸಾಹಿತ್ಯದ ಪ್ರಭಾವ ಮಾರ್ಗದರ್ಶಕವಾಗಿ ಅನುಸರಿಸಬಹುದು ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ್. ಎನ್ ಋಗ್ವೇದಿ ತಿಳಿಸಿದರು.

ಅವರು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡಿದ್ದ ಡಾ. ಚನ್ನವೀರ ಕಣವಿ #Channveera Kanavi ಹಾಗೂ ಡಾ. ಸಿದ್ದಲಿಂಗಯ್ಯನವರ #Siddalingaiah ಸಾಹಿತ್ಯ ಕೊಡುಗೆಗಳ ಕುರಿತು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಚನ್ನವೀರ ಕಣವಿಯವರು ಸಮನ್ವಯ ಸಾಹಿತ್ಯದ ಶ್ರೇಷ್ಠ ರಚನಾಕಾರರು. ತಮ್ಮ ಇಡೀ ಜೀವನವನ್ನು ಸಾಹಿತ್ಯ ಸೇವೆಯಲ್ಲಿ ತೊಡಗಿ ಅಪಾರವಾದ ಕೊಡುಗೆ ನೀಡಿದ ಕಣವಿಯವರು ಸೌಮ್ಯ ಮತ್ತು ಸಭ್ಯ ವ್ಯಕ್ತಿತ್ವ ಹೊಂದಿದವರು . 18 ಕವನ ಸಂಕಲನಗಳು, ಐದು ವಿಮರ್ಶಾ ಲೇಖನಗಳು , ಮಕ್ಕಳ ಸಂಕಲನ ಸಂಪಾದಿತ ಗ್ರಂಥಗಳನ್ನು ರಚಿಸಿದ ಮಹಾನ್ ವ್ಯಕ್ತಿ .ಕನ್ನಡದಲ್ಲಿ ರೂಪ ಮತ್ತು ವಸ್ತು ವೈವಿಧ್ಯದಿಂದ ಕೂಡಿರುವ ಸುನೀತಾ ಗಳ ವಿಶೇಷ ಪ್ರಕಾರವನ್ನು ರಚಿಸಿದ ಕಣವಿ ಯವರು ತಮ್ಮದೇ ಆದ ಮೂಲ ಚಿಂತನೆ ,ತತ್ವ ಜ್ಞಾನ, ಜೀವನದ ಭರವಸೆಗಳ ಅಂಶಗಳನ್ನು ಅವರ ಸಾಹಿತ್ಯದಲ್ಲಿ ಪ್ರಭಾವಿಸಿದ್ದಾರೆ. ಹಾಗೆಯೇ ಸಾಹಿತಿ ಡಾ. ಸಿದ್ದಲಿಂಗಯ್ಯನವರು ಸಾಮಾಜಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬೆಳಗಿಸಿದರು ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕರಾದ ರವಿಚಂದ್ರ ಪ್ರಸಾದ್ ಮಾತನಾಡಿ ಸಿದ್ದಲಿಂಗಯ್ಯನವರಿಗೆ ಚಾಮರಾಜನಗರದ ಒಡನಾಟ ಅಪಾರವಾಗಿತ್ತು. ಸಿದ್ದಲಿಂಗಯ್ಯನವರು ಸದಾ ಕಾಲ ಸೃಜನಾತ್ಮಕ ಸಾಹಿತ್ಯ ಹಾಗೂ ನೊಂದ ಜನರ ನೋವಿನ್ನು ಜಗತ್ತಿಗೆ ತಿಳಿಸಿದವರು. ಸಾಮಾಜಿಕ ಅವ್ಯವಸ್ಥೆಗಳನ್ನು ತಿದ್ದಿ ,ಸಾಹಿತ್ಯದ ಮೂಲಕ ಬಹುಜನರ ಪ್ರಜ್ಞೆಯನ್ನು ಹೆಚ್ಚಿಸಿದರು. ಸಿದ್ದಲಿಂಗಯ್ಯನವರ ಸಾಹಿತ್ಯದಲ್ಲಿ ಬಡ ಹಾಗೂ ನೊಂದ ಜನರ ಜೀವಂತಿಕೆಯ ನೋವು ನಲಿವುಗಳನ್ನು ತಿಳಿಸಿದ್ದಾರೆ ಎಂದರು.
ಬರಹಗಾರ ಲಕ್ಷ್ಮಿ ನರಸಿಂಹ ಮಾತನಾಡಿ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ವಹಿಸಿದ್ದ ಸಿದ್ಧಲಿಂಗಯ್ಯನವರು ಸರಸ್ವತಿಯ ಪುತ್ರರು. ಪ್ರಾಧ್ಯಾಪಕರಾಗಿ ಅಪಾರ ಶಿಷ್ಯರನ್ನು ಹೊಂದಿದ್ದ ಸಿದ್ಧಲಿಂಗಯ್ಯನವರು ನಾಡಿನ ಎಲ್ಲಡೆ ಅಭಿಮಾನದ ಸಾಹಿತ್ಯದ ಓದುಗರನ್ನು ಸೃಷ್ಟಿಸಿದರು ಎಂದರು.

ಕಾರ್ಯಕ್ರಮದಲ್ಲಿ ರವಿಚಂದ್ರಪ್ರಸಾದ್ ಕಹಳೆ ಹಾಗೂ ಶಿವಲಿಂಗ ಮೂರ್ತಿರವರು ಗೀತ ಗಾಯನವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಶಿವಲಿಂಗ ಮೂರ್ತಿ, ಬಿಕೆ ಆರಾಧ್ಯ, ಪದ್ಮ ಪುರುಷೋತ್ತಮ್, ನಿವೃತ್ತ ಶಿಕ್ಷಕಿ ಸರಸ್ವತಿ, ಮನೋಜ್, ಕಿರಣ್ ಆದಿತ್ಯ, ಪ್ರಕಾಶ್, ಮಂಜುನಾಥ ಮುಂತಾದವರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ChamarajanagaraChannveera KanaviKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSiddalingaiahಚಾಮರಾಜನಗರಡಾ. ಚನ್ನವೀರ ಕಣವಿಡಾ. ಸಿದ್ದಲಿಂಗಯ್ಯ
Share196Tweet123Send
Previous Post

ದೇಶಿಯ ಆಡಳಿತಗಾರರಿಗೆ ಶಿವಾಜಿ ಮಹಾರಾಜರು ಒಂದು ಮಾದರಿ…!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಚನ್ನವೀರ ಕಣವಿಯವರು ಸಮನ್ವಯ ಸಾಹಿತ್ಯದ ಶ್ರೇಷ್ಠ ರಚನಾಕಾರರು: ಸುರೇಶ್ ಋಗ್ವೇದಿ

ಚನ್ನವೀರ ಕಣವಿಯವರು ಸಮನ್ವಯ ಸಾಹಿತ್ಯದ ಶ್ರೇಷ್ಠ ರಚನಾಕಾರರು: ಸುರೇಶ್ ಋಗ್ವೇದಿ

February 19, 2026
ದೇಶಿಯ ಆಡಳಿತಗಾರರಿಗೆ ಶಿವಾಜಿ ಮಹಾರಾಜರು ಒಂದು ಮಾದರಿ…!

ದೇಶಿಯ ಆಡಳಿತಗಾರರಿಗೆ ಶಿವಾಜಿ ಮಹಾರಾಜರು ಒಂದು ಮಾದರಿ…!

February 19, 2026
ಬದುಕಿನ ಪಯಣ | ಹಣತೆ ಹಚ್ಚುವ ಹತ್ತು ಪೈಸೆ ಮತ್ತು ಸಾರ್ಥಕತೆಯ ಹಾದಿ

ಬದುಕಿನ ಪಯಣ | ಹಣತೆ ಹಚ್ಚುವ ಹತ್ತು ಪೈಸೆ ಮತ್ತು ಸಾರ್ಥಕತೆಯ ಹಾದಿ

February 19, 2026
ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ – 45 ಚಿತ್ರ ಜೀ಼ ಕನ್ನಡದಲ್ಲಿ | ಯಾವತ್ತು?

ಹ್ಯಾಟ್ರಿಕ್ ಹೀರೋ, ರಿಯಲ್ ಸ್ಟಾರ್, ರಾಜ್ ಬಿ ಶೆಟ್ಟಿ – 45 ಚಿತ್ರ ಜೀ಼ ಕನ್ನಡದಲ್ಲಿ | ಯಾವತ್ತು?

February 19, 2026
ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

ಫೆ.20-21 ರಂದು ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ | ವಿವೇಕ್ ಆಳ್ವಾ

February 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL