ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ |
ನವ ಭಾರತದ ನಿರ್ಮಾಣಕ್ಕೆ ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಸಂವಿಧಾನ ಸ್ಪೂರ್ತಿ ವ್ಯಾಪಕವಾಗಿದೆ. ಸರ್ವೇ ಜನಾಃ ಸುಖಿನೋ ಭವಂತು ಎಂಬಂತೆ ಸರ್ವರೂ ಸುಖವಾಗಿರುವ ಹಾಗೂ ಅಭಿವೃದ್ಧಿಯ ದಿಕ್ಕಿನಲ್ಲಿ ಸಾಗುವ ಭಾರತ ಜಗತ್ತಿನಲ್ಲೇ ಶ್ರೇಷ್ಠ ದೇಶವೆಂದು ಇತಿಹಾಸ ಉಪನ್ಯಾಸಕರಾದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.
ಅವರು ಅಮಚವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡುತ್ತ ಭಾರತದ ಶಿಕ್ಷಣ ,ಆರೋಗ್ಯ, ರಸ್ತೆ, ಸೇತುವೆ, ಕೈಗಾರಿಕೆ, ಕೃಷಿ ,ವಿಜ್ಞಾನ, ತಂತ್ರಜ್ಞಾನ, ಬಾಹ್ಯಾಕಾಶ ,ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ, ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಇಡೀ ವಿಶ್ವದಲ್ಲೇ ಅತ್ಯಂತ ಪ್ರಗತಿಪಥದ ಆರ್ಥಿಕ ಅಭಿವೃದ್ಧಿಯನ್ನು ಸಾಧಿಸುತ್ತಿರುವ ಭಾರತದ ಪ್ರಜೆಗಳಾದ ನಾವೆಲ್ಲರೂ ಧನ್ಯರಾಗಿದ್ದೇವೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಉನ್ನತ ಶಿಕ್ಷಣವನ್ನು ಪಡೆದು ಉತ್ತಮ ವ್ಯಕ್ತಿಗಳಾಗಿ ಶ್ರೇಷ್ಠ ನಾಗರಿಕರಾಗಬೇಕಾಗಿದೆ ಯಾವುದೇ ಕ್ಷೇತ್ರದಲ್ಲಿ ಅಪರಿಮಿತವಾದ ಸಾಧನೆಯನ್ನು ಮಾಡಿ ಭಾರತ ರತ್ನ, ಪದ್ಮಭೂಷಣ, ಪದ್ಮಶ್ರೀ , ರಾಷ್ಟ್ರ, ರಾಜ್ಯ, ಪ್ರಶಸ್ತಿಗಳನ್ನು ಪಡೆಯುವಂತಹ ಸಾಧಕರಾಗಬೇಕು. ನಮ್ಮ ಸಮಯವನ್ನು ಉತ್ತಮ ರೀತಿಯಲ್ಲಿ ಸದುಪಯೋಗಪಡಿಸಿಕೊಂಡಾಗ ಶಿಕ್ಷಣ ಜೊತೆಗೆ ಉದ್ಯೋಗವನ್ನು ಸೃಷ್ಟಿಸಿಕೊಳ್ಳಬಹುದು ಎಂದು ತಿಳಿಸಿದರು.
ಸಂವಿಧಾನ ರಚನೆಗೆ ಅಪಾರ ಶ್ರಮವಹಿಸಿ ಕರಡು ಸಮಿತಿಯ ಅಧ್ಯಕ್ಷರಾಗಿ ಡಾ. ಬಿಆರ್ ಅಂಬೇಡ್ಕರ್ ಅವರ ಸೇವೆಯನ್ನು ಭಾರತೀಯರು ಮರೆಯಲಾರರು ಎಂದರು.
ಹಿರಿಯ ಉಪನ್ಯಾಸಕ ಮೂರ್ತಿ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್ ಅವರ ಸಂವಿಧಾನವು ಪ್ರತಿಯೊಬ್ಬ ಭಾರತೀಯನ ಪ್ರಗತಿಗೆ ಕಾರಣವಾಗಿದೆ. ಸರ್ವ ಜನರ ಅಭಿವೃದ್ಧಿಗೆ ಕಾರಣವಾಗಿರುವ ಸಂವಿಧಾನವನ್ನು ಅಂಗೀಕರಿಸಿದ ದಿನವೇ ಜನವರಿ 26. ಗಣರಾಜ್ಯೋತ್ಸವವಾಗಿ ಪ್ರತಿಯೊಬ್ಬ ಭಾರತೀಯನು ಹೆಮ್ಮೆಯಿಂದ ಆಚರಿಸುತ್ತಾನೆ ಎಂದರು.
ಅರ್ಥಶಾಸ್ತ್ರ ಉಪನ್ಯಾಸಕ ಬಸವಣ್ಣನವರು ಮಾತನಾಡಿ, ಭಾರತ ವಿಶ್ವದಲ್ಲೇ ಶ್ರೇಷ್ಠವಾದ ಸಂವಿಧಾನವನ್ನು ಹೊಂದಿದೆ ಜಗತ್ತಿನ ವಿವಿಧ ರಾಷ್ಟ್ರಗಳ ಶ್ರೇಷ್ಠ ಅಂಶಗಳ ಜೊತೆಗೆ ಸಂವಿಧಾನ ರಚನಾ ಸಮಿತಿಯ ಕಾರ್ಯ ಅಗಾಧವಾದದ್ದು. ಭಾರತ ಇಂದು ಅಭಿವೃದ್ಧಿಯ ಪಥದಲ್ಲಿ ಸಾಗಿದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉತ್ತಮ ವಿದ್ಯಾವಂತರಾಗಿ ಕೀರ್ತಿಗಳಿಸಿಕೊಳ್ಳಲು ಅವಕಾಶ; ನೀಡಿದೆ ಎಂದು ತಿಳಿಸಿದರು.
ರಾಜ್ಯಶಾಸ್ತ್ರ ಉಪನ್ಯಾಸಕಿ ದೊಡ್ಡಮ್ಮ ಸಂವಿಧಾನ ರಚನೆಯ ಮಹತ್ವದ ಕುರಿತು ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಶಿವನಂಜ ಪ್ಪನವರು ವಹಿಸಿ ಮಾತನಾಡುತ್ತ ಭಾರತ ದೇಶದ ಇತಿಹಾಸ ಮತ್ತು ಪ್ರಗತಿಯ ಹಾದಿಯ ಸಮಗ್ರ ಮಾಹಿತಿಯನ್ನು ವಿದ್ಯಾರ್ಥಿಗಳು ಪಡೆಯಬೇಕು. ಇಂದು ಭಾರತ ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿಯನ್ನು ಸಾಧಿಸುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕುಮಾರ್, ಉಪನ್ಯಾಸಕರಾದ ಶಿವರಾಂ, ರಮೇಶ್, ಸುರೇಶ್ ಇದ್ದರು. ವಿದ್ಯಾರ್ಥಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















