ಕಲ್ಪ ಮೀಡಿಯಾ ಹೌಸ್ | ಅಪರಾಧ ಸುದ್ದಿ |
ಆಗಷ್ಟೇ ಹೊಸ ಬಾಳಿನ ಕನಸು ಕಂಡು ವಿವಾಹ ಆರತಕ್ಷತೆಗೆ #Reception ತೆರಳುತ್ತಿದ್ದ ವರನಿಗೆ ಚಾಕು ಇರಿಯಲಾಗಿದಿರುವ ಘಟನೆ ಜಿಲ್ಲೆಯ ಕೊಳ್ಳೆಗಾಲದಲ್ಲಿ ನಡೆದಿದೆ.
ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯನ್ನು ಎಲ್. ರವೀಶ್(34) ಎಂದು ಗುರುತಿಸಲಾಗಿದೆ.
ಗಾಯಾಳು ರವೀಶ್’ಗೆ ಹೊಸ ಅಣಗಳ್ಳಿ ಗ್ರಾಮದ ಯುವತಿಯೊಬ್ಬಳ ಜೊತೆಯಲ್ಲಿ ವಿವಾಹ ನಿಶ್ಚಯವಾಗಿದ್ದು, ಕೊಳ್ಳೆಗಾಲದ #Kollegala ಹಾಲ್ ಒಂದರಲ್ಲಿ ಆರತಕ್ಷತೆ ಏರ್ಪಾಡಾಗಿತ್ತು. ಆರತಕ್ಷತೆಗೆ ತೆರಳುತ್ತಿದ್ದ ಮದುಮಗನಿಗೆ ಚಾಕು ಇರಿಯಲಾಗಿದೆ.
ಆರತಕ್ಷತೆಗೆ ತಮ್ಮ ಗ್ರಾಮದಿಂದ ಕಾರಿನಲ್ಲಿ ಕುಟುಂಬ ಸದಸ್ಯರೊಂದಿಗೆ ತೆರಳುವಾಗ ಕೊಳ್ಳೇಗಾಲದ ಎಂಜಿಎಸ್’ವಿ ಕಾಲೇಜು ರಸ್ತೆಯ ಬಳಿ ವರ ತೆರಳುತ್ತಿದ್ದ ಕಾರನ್ನು ಹಿಂಬಾಲಿಸಿ ದುಷ್ಕರ್ಮಿಗಳು ಕಾರನ್ನು ಅಡ್ಡಗಟ್ಟಿ ಏಕಾಏಕಿ ಹಲ್ಲೆ ನಡೆಸಿದ್ದಾರೆ.
ರವೀಶ್ ಮೇಲೆ ಚಾಕುವಿನಿಂದ ಇರಿಯಲು ಯತ್ನಿಸಿದ್ದು, ಎಡಗೈ ತೊಳಿಗೆ ಚಾಕು ಇರಿದು ರಕ್ತಸ್ರಾವವಾಗಿದೆ. ಸದ್ಯ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ರವೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜ.30 ರಂದು ಮದುವೆ ನಿಶ್ಚಯವಾಗಿದ್ದರಿಂದ ಕಾರಿನಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುವಾಗ ಹಿಂಬದಿಯಿಂದ ಮತ್ತೊಂದು ಕಾರಿನಲ್ಲಿ ಬಂದವರು ನನಗೆ ಏಕಾಏಕಿ ಚಾಕುವಿನಿಂದ ಹಲ್ಲೆ ಮಾಡಿದರು. ನನ್ನ ಮೇಲೆ ಹಲ್ಲೆ ನಡೆಸಿದವರು ಯಾರೆಂದು ಗೊತ್ತಿಲ್ಲ ಎಂದು ವರದಿಯಾಗಿದೆ.
ಕೊಳ್ಳೇಗಾಲ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















