No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

ಭಗವಾನ್ ಮಹಾವೀರರು ವಿಶ್ವದ ಬೆಳಕು: ಸುರೇಶ್ ಋಗ್ವೇದಿ

ಚಾಮರಾಜನಗರ | ಡಾ.ರಾಜಕುಮಾರ್ ರಂಗಮಂದಿರದಲ್ಲಿ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮ

kalpa News by kalpa News
April 14, 2026
in ಚಾಮರಾಜನಗರ
0
ಭಗವಾನ್ ಮಹಾವೀರರು ವಿಶ್ವದ ಬೆಳಕು: ಸುರೇಶ್ ಋಗ್ವೇದಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚಾಮರಾಜನಗರ  |

ಭಗವಾನ್ ಮಹಾವೀರರು ವಿಶ್ವದ ಬೆಳಕು. ಜಗತ್ತಿಗೆ ಶಾಂತಿ,ಸತ್ಯ,ಅಹಿಂಸೆ ಬೋಧಿಸಿದ ಭಾರತೀಯ ಶ್ರೇಷ್ಠ ಪುಣ್ಯ ಪುರುಷರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಉಪನ್ಯಾಸಕರು ಆದ ಸುರೇಶ್ ಎನ್ ಋಗ್ವೇದಿ ತಿಳಿಸಿದರು.

ಅವರು ಜಿಲ್ಲಾಡಳಿತ,ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಡಾ.ರಾಜಕುಮಾರ್ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
ಪ್ರಸ್ತುತ ಮನುಷ್ಯನಿಗೆ ಆಂತರಿಕ ಶಾಂತಿ ತುಂಬಾ ಅಗತ್ಯವಾಗಿದೆ. ಶಾಂತಿಯನ್ನು ಕಾಪಾಡಿಕೊಳ್ಳಲು ಮಾನವ ಧ್ಯಾನ ಮತ್ತು ಮೌನದ ಮೂಲಕ ಸಾಧಿಸಿಕೊಳ್ಳಬಹುದು. ಅನ್ಯತಾ ವಿಷಯಗಳಿಗೆ ತಲೆಹಾಕದೆ ತನ್ನನ್ನು ತಾನು ಅರಿಯುವ ಕಾರ್ಯವನ್ನು ಮಾಡುವ ಮೂಲಕ ಮಾನವ ಜೀವನವನ್ನು ಪವಿತ್ರ ಗೊಳಿಸಿಕೊಳ್ಳಬೇಕು ಎಂದರು.

ಭಗವಾನ್ ಮಹಾವೀರರು ತಮ್ಮ 30ನೇ ವಯಸ್ಸಿನಲ್ಲಿ ಧ್ಯಾನವನ್ನು ಮತ್ತು ತಪಸ್ಸನ್ನು ಆಚರಿಸುವ ಮೂಲಕ ನಿರಂತರ 12 ವರ್ಷಗಳ ಕಾಲ ಸತ್ಯವನ್ನು ಅರಿಯುವ ಕಾರ್ಯವನ್ನು ಮಾಡಿ ಜಗತ್ತಿಗೆ ಅಹಿಂಸೆಯ ಪರಮ ಸತ್ಯವನ್ನು ಬೋಧಿಸಿದರು. ಅಹಿಂಸೆ, ಸತ್ಯ, ಕಳ್ಳತನ ಮಾಡದಿರುವುದು, ಚಾರಿತ್ರ್ಯ, ಹಾಗೂ ಅಧಿಕ ಸಂಪತ್ತನ್ನು ಸಂಗ್ರಹ ಮಾಡದಿರುವ ಮಹತ್ತರವಾದ ತತ್ವಗಳನ್ನು ಬೋಧಿಸಿದ ಮಹಾವೀರರು ಇಂದು ಜಗತ್ತಿಗೆ ಇವರ ಸಂದೇಶ ತುಂಬಾ ಅಗತ್ಯವಾಗಿದೆ ಎಂದು ತಿಳಿಸಿದರು.
ಆರ್ಥಿಕ ಮುನ್ನಡೆಯನ್ನು ಸಾಧಿಸಿ ಸಾಮ್ರಾಜ್ಯ ದಾಹದ ಮೂಲಕ ಅಹಂಕಾರ,ದರ್ಪ ತೋರಿಸುವ ಮೂಲಕ ಯುದ್ಧ ಕದನಕ್ಕೆ ದಾರಿಯಾಗಿ ಜಗತ್ತು ಇಂದು ಸಂಕಷ್ಟಕ್ಕೆ ಒಳಗಾಗಿದೆ. ರಾಜ್ಯ, ಸಂಪತ್ತು,ವಜ್ರ ವೈಡೂರ್ಯಗಳು ಶಾಶ್ವತವಲ್ಲ ಎಂಬ ಸತ್ಯವನ್ನು ಅರಿತ ವರ್ಧಮಾನ ಮಹಾವೀರರು ತ್ರಿ ರತ್ನಗಳನ್ನು ತಿಳಿಸಿದವರು. ಇಡೀ ಭಾರತದ ಮೂಲೆ ಮೂಲೆಗಳಲ್ಲಿ ಜೈನ ಧರ್ಮದ ಶಾಸನಗಳು, ಕಲೆ, ವಾಸ್ತು ಶಿಲ್ಪ ಕಾಣಬಹುದು ಚಾಮರಾಜನಗರ ಜಿಲ್ಲೆಯಲ್ಲಿ ವಿಶ್ವಕ್ಕೆ ಮಾದರಿಯಾದ ಜೈನ ಕೇಂದ್ರವಾದ ಕನಕಗಿರಿ, ಚಾಮರಾಜನಗರದ ಪಾಶ್ವನಾಥ ಮಂದಿರಗಳು,ಕುದೇರು, ಉಮ್ಮತ್ತೂರು, ಬೇಗೂರು ಗುಂಡ್ಲುಪೇಟೆ ಕೊಳ್ಳೇಗಾಲ ಹನೂರುಗಳಲ್ಲಿ ನೂರಾರು ಜೈನ ಪರಂಪರೆಯ ಶಾಸನಗಳು ದೊರೆತಿವೆ . ಜೈನ ಪರಂಪರೆಯ ಜನ ಶಾಂತಿ ಪ್ರಿಯರು.ಸಮಾಜಕ್ಕೆ ಸದಾ ಕಾಲ ಸಹಾಯವನ್ನು ನೀಡುವ ಶ್ರೇಷ್ಠರು ಎಂದು ಬಣ್ಣಿಸಿದರು.

ಉದ್ಘಾಟನೆಯನ್ನು ಕಾವೇರಿ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ ಮರಿಸ್ವಾಮಿ ಉದ್ಘಾಟಿಸಿ ಪ್ರಪಂಚದಲ್ಲಿ ಭ್ರಷ್ಟಾಚಾರ,ಯುದ್ಧ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಮಹಾವೀರದ ತತ್ವ ಆದರ್ಶಗಳು ಸಮಾಜಕ್ಕೆ ಸಹಕಾರಿಯಾಗಿವೆ. ಸಕಲ ಪ್ರಾಣಿಗಳಗೂ ಜೀವಿಸುವ ಹಕ್ಕಿದೆ ಎಂಬ ಶಾಂತಿ ಬೋಧನೆ ನಡೆಸಿದ ಇವರು ಇನ್ನೊಬ್ಬರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎನ್ನುವ ದಾರಿಯಲ್ಲಿ ಸಾಗುವ ಮೂಲಕ ಸುಖದ ಬದುಕನ್ನು ನಡೆಸಬೇಕು ಎಂದು ತಿಳಿಸಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗ್ರ್ ರವರು ಮಹಾವೀರರ ಜೀವನ ಮತ್ತು ಮೌಲ್ಯಗಳ ಜಾಗೃತಿ ಮೂಡಿಸಿಕೊಂಡು ಉತ್ತಮ ಬದುಕನ್ನು ನಡೆಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜೈನ ಸಮಾಜದ ಮುಖಂಡರಾದ ನಿರ್ಮಲ್ ಕುಮಾರ್, ಕನ್ನಯ್ಯ ಲಾಲ್,ಉಲ್ಲಾಸ್,ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜು, ನಗರಸಭೆಯ ಪೌರಾಯುಕ್ತರಾದ ಪರಶುರಾಮ ಎಂ ಚಲವಾದಿ ಉಪಸ್ಥಿತರಿದ್ದರು.

ಮಹಾವೀರರ ಭವ್ಯ ಮೆರವಣಿಗೆ

ಜಿಲ್ಲಾಡಳಿತ ಹಮ್ಮಿಕೊಂಡಿದ್ದ ವರ್ಧಮಾನ ಮಹಾವೀರ ಜಯಂತಿ ಅಂಗವಾಗಿ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿಂದ ಬೃಹತ್ ಬೆಳ್ಳಿರಥದಲ್ಲಿ ವರ್ಧಮಾನರ ಭಾವಚಿತ್ರಕ್ಕೆ ಅಲಂಕಾರ ಸಹಿತ ನಾದಸ್ವರದೊಂದಿಗೆ ಸಮಾಜದ ಬಂಧುಗಳು ಮೆರವಣಿಗೆ ಹೊರಟು ಜಿಲ್ಲಾಡಳಿತ ಭವನದ ವರೆಗೆ ಮೆರವಣಿಗೆ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

                               

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews Kannadaಚಾಮರಾಜನಗರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Next Post

ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

kalpa News

kalpa News

Next Post
ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

ಅಂಬೇಡ್ಕರ್ ಅವರು ಭಾರತೀಯ ಇತಿಹಾಸದ ಅತ್ಯಂತ ಪ್ರತಿಭಾನ್ವಿತ ನಾಯಕರಲ್ಲಿ ಒಬ್ಬರು: ಡಾ. ರವೀಂದ್ರ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL