ಕಲ್ಪ ಮೀಡಿಯಾ ಹೌಸ್
ಚಾಮರಾಜನಗರ: ಆಕ್ಸಿಜನ್ ಕೊರತೆಯಿಂದಾಗಿ ಜಿಲ್ಲಾಸ್ಪತ್ರೆಯಲ್ಲಿ ಕಳೆದ ರಾತ್ರಿ 20ಕ್ಕೂ ಹೆಚ್ಚು ಕೊರೋನಾ ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಕ್ಸಿಜನ್‌ನ ಕೊರತೆಯಿಂದಾಗಿ ರೋಗಿಗಳು ಪರದಾಟ ನಡೆಸಿದ್ದರು. ವಿಷಯ ತಿಳಿದ ಸಂಸದ ಪ್ರತಾಪ್ ಸಿಂಹ 50 ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳಿಸಿಕೊಡುವ ವ್ಯವಸ್ಥೆ ಮಾಡಿದರಾದರೂ, ಆಕ್ಸಿಜನ್ ಸಿಲಿಂಡರ್‌ಗಳು ಬರುವ ವೇಳೆಗೆ ಹಲವು ಕೊರೋನಾ ರೋಗಿಗಳು ಕೊನೆಯುಸಿರೆಳೆದಿದ್ದರು ಎನ್ನಲಾಗಿದೆ.
ನಿನ್ನೆ ರಾತ್ರಿ 16 ಮಂದಿ ಹಾಗೂ ಇಂದು ಬೆಳಗಿನ ಜಾವ 4ಕ್ಕೂ ಹೆಚ್ಚು ರೋಗಿಗಳು ಮೃತಪಟ್ಟಿದ್ದು, ವಿಷಯ ತಿಳಿಯುತ್ತಿದ್ದಂತೆ ರೋಗಿಗಳ ಸಂಬಂಧಿಕರು ಜಿಲ್ಲಾಸ್ಪತ್ರೆಗೆ ಧಾವಿಸುತ್ತಿದ್ದಾರೆ. ತಮ್ಮ ಕುಟುಂಬದ ಸದಸ್ಯರನ್ನು ಕಳೆದುಕೊಂಡವರ ಆಕ್ರಂದನ ಹೆಚ್ಚಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಸ್ಪತ್ರೆ ಮುಂಭಾಗ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ತನಿಖೆಗೆ ಆದೇಶ:
ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿಯ ಸಾವಿಗೆ ಕಾರಣವಾದ ದುರಂತ ಪ್ರಕರಣದ ತನಿಖೆಗೆ ರಾಜ್ಯ ಸರಕಾರ ಆದೇಶಿಸಿದೆ.
ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೊಗಿ ಕಳಸದ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಆಕ್ಸಿಜನ್ ದುರಂತ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ, 3 ದಿನಗಳ ಒಳಗಾಗಿ ವರದಿಯನ್ನು ಸಲ್ಲಿಸುವಂತೆ ಆದೇಶಿಸಲಾಗಿದೆ.










Discussion about this post