ಕಲ್ಪ ಮೀಡಿಯಾ ಹೌಸ್
ಚಂಡೀಘಡ: ಪಂಜಾಬ್‌ನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಇಂದು ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು.
ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಮುಖಂಡರಾದ ಸುಖಜಿಂದರ್ ರಾಂಧವ ಹಾಗೂ ಒಪಿ ಸೋನಿಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕ್ಯಾಪ್ಟನ್ ಅಮರೀಂದರ್ ಸಿಂಗ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಚರಣ್ ಜಿತ್ ಸಿಂಗ್ ಛನಿ ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಮತ್ತು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಉಪಸ್ಥಿತರಿದ್ದರು. ನಿರ್ಗಮಿತ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಮಾರಂಭದಲ್ಲಿ ಗೈರು ಹಾಜರಾಗಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post