ಕಲ್ಪ ಮೀಡಿಯಾ ಹೌಸ್ | ಚಂಡೀಗಢ |
ಮಹತ್ವದ ಬೆಳವಣಿಗೆಯಲ್ಲಿ ಹರಿಯಾಣ ಮುಖ್ಯಮಂತ್ರಿ ಸ್ಥಾನಕ್ಕೆ ಮನೋಹರ್ ಲಾಲ್ ಕಟ್ಟರ್ Haryana CM Manohar Lal Khattar ರಾಜೀನಾಮೆ ಸಲ್ಲಿಸಿದ್ದು, ಅವರು ಲೋಕಸಭಾ ಚುಣಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿದೆ.
ಹರಿಯಾಣದಲ್ಲಿ ಬಿಜೆಪಿ ಮತ್ತು ಜನನಾಯಕ್ ಜನತಾ ಪಕ್ಷಗಳ ನಡುವೆ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆಯ ಮಾತುಕತೆಯಲ್ಲಿ ಉಂಟಾದ ಭಿನ್ನಾಭಿಪ್ರಾಯಗಳ ನಡುವೆ ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆಯೇ ಬಿಜೆಪಿಯ ಎಲ್ಲಾ 41 ಶಾಸಕರ ಹಾಜರಾತಿಯೊಂದಿಗೆ ಬಿಜೆಪಿಯ ನಿರ್ಣಾಯಕ ಶಾಸಕಾಂಗ ಸಭೆ ನಡೆಯುತ್ತಿದೆ. ತರುಣ್ ಚುಗ್, ಕೇಂದ್ರ ಸಚಿವ ಅರ್ಜುನ್ ಮುಂಡಾ, ಪಕ್ಷದ ರಾಜ್ಯ ಉಸ್ತುವಾರಿ ಬಿಪ್ಲಬ್ ಕುಮಾರ್ ದೇಬ್ ಮುಂತಾದ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

ಇನ್ನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಖಟ್ಟರ್ ಅವರು ಲೋಕಸಭಾ ಚುನಾವಣೆಗೆ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಹರಿಯಾಣದಲ್ಲಿ ಉದ್ಭವಿಸಿರುವ ಸಮಸ್ಯೆಗಳ ನಡುವೆ, ಬಿಜೆಪಿ ಕೇಂದ್ರ ನಾಯಕತ್ವವು ಜೆಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಪಕ್ಷದ ಕೇಂದ್ರ ವೀಕ್ಷಕರಾಗಿ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ಅರ್ಜುನ್ ಮುಂಡಾ ಮತ್ತು ಹಿರಿಯ ನಾಯಕ ತರುಣ್ ಚುಗ್ ಅವರನ್ನು ಚಂಡೀಗಢಕ್ಕೆ ಕಳುಹಿಸುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post