ಕಲ್ಪ ಮೀಡಿಯಾ ಹೌಸ್ | ಚಂದ್ರಗುತ್ತಿ |
ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವವನ್ನು Chandragutti Renukamba Fair ಸರ್ಕಾರದ ಆದೇಶದಂತೆ ಹಿಂದಿನಿಂದ ನಡೆದು ಬಂದ ಸಂಪ್ರದಾಯದಂತೆ ಆಚರಿಸಲಾಗುವುದು ಎಂದು ಸಾಗರ ಉಪ ವಿಭಾಗಾಧಿಕಾರಿ ಆರ್. ಯತೀಶ್ ಹೇಳಿದರು,
ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದ ಆಡಳಿತ ಕಚೇರಿಯಲ್ಲಿ ಜಾತ್ರೆ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿ, ಮಾರ್ಚ್ 15 ರಿಂದ 20ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು ಮಾರ್ಚ್ 18 ರಂದು ಮಹಾರಥೋತ್ಸವ ನಡೆಯಲಿದೆ ಎಂದು ತಿಳಿಸಿದರು.
ಕ್ಷೇತ್ರದ ಅಭಿವೃದ್ಧಿಗಾಗಿ 52 ಲಕ್ಷ ವೆಚ್ಚದಲ್ಲಿ ಶೌಚಾಲಯ, ಸ್ನಾನಗೃಹ, ಕಾಂಪೌಂಡ್ ಸೇರಿದಂತೆ ಮೂಲ ಸೌಲಭ್ಯಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆ ಆಗಿದ್ದು, ಜಾತ್ರಾ ಮಹೋತ್ಸವದಲ್ಲಿ ಬರುವ ಭಕ್ತರಿಗೆ ಸೌಲಭ್ಯ ಹಾಗೂ ಮೊಬೈಲ್ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಭಕ್ತರಿಗೆ ಉಳಿದುಕೊಳ್ಳುಲು ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.
ರಾಜ್ಯದಲ್ಲಿ ಲಕ್ಷಾಂತರ ಭಕ್ತರನ್ನು ಹೊಂದಿರುವ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಕ್ಷೇತ್ರವು ಅಭಿವೃದ್ಧಿಯಿಂದ ಕುಂಠಿತವಾಗಿದೆ ಹುಣ್ಣಿಮೆ ಸೇರಿದಂತೆ ವಿಶೇಷ ದಿನಗಳಲ್ಲಿ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಆಗಮಿಸುತ್ತಾರೆ ಆದರೆ ಭಕ್ತರಿಗೆ ಯಾವುದೇ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ ಎಂದು ಸಾರ್ವಜನಿಕರು ಸಭೆಯಲ್ಲಿ ದೂರಿದರು. ರಥಬೀದಿ ಅಂಗಡಿಗಳಲ್ಲಿ ರಾಸಾಯನಿಕ ಕುಂಕುಮ ಮಾರಾಟ ಮಾಡದಂತೆ ಸೂಚನೆ ನೀಡಬೇಕೆಂದು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ಗ್ರಾಪಂ ಉಪಾಧ್ಯಕ್ಷ ರೇಣುಕಾ ಪ್ರಸಾದ್ ಮಾತನಾಡಿ, ದೇವಸ್ಥಾನದಲ್ಲಿ ಸೇವೆ ಸಲ್ಲಿಸುವಂತಹ ವಾದ್ಯ ನುಡಿಸುವವರು, ತೇರು ಕಟ್ಟುವವರು, ಪಲ್ಲಕ್ಕಿ ಹೊರುವ ಕಾರ್ಮಿಕರಿಗೆ ಹಿಂದಿನಿಂದಲೂ ಗೌರವ ಧನ ನೀಡಲಾಗುತ್ತಿದ್ದು, ಅದನ್ನು ಹೆಚ್ಚಳ ಮಾಡಬೇಕು ಎಂದರು.
Also read: ಗಮನ ಸೆಳೆದ ಉಸ್ತಾದ್ ಝಾಕೀರ್ ಹುಸೇನ್ ತಬಲಾ & ಪಂಡಿತ್ ನೀಲಾದ್ರಿ ಕುಮಾರ್ ಸಿತಾರ್ ಜುಗಲ ಬಂದಿ
ಜಾತ್ರೆಗೆ ಸೀಮಿತವಾಗಿ ಅಭಿವೃದ್ಧಿಪಡಿಸದೆ ನಿರಂತರವಾಗಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ, ಭಕ್ತರಿಗೆ ಅನುಕೂಲ ವಾಗುವಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು. ಸಚಿವ ಎಸ್. ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಚಂದ್ರಗುತ್ತಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಅಭಿವೃದ್ಧಿಪಡಿಸೋಣ ಎಂದರು.
ತಹಶೀಲ್ದಾರ್ ಹುಸೇನ್ ಸರಕಾವಸ್, ಪುರಾತತ್ವ ಇಲಾಖೆ ಸಿ.ಓ ನಂದಕುಮಾರ್, ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ವಿ.ಎಲ್ ಶಿವಪ್ರಸಾದ್, ಇಒ ಪ್ರದೀಪ್ ಕುಮಾರ್, ಪುರಸಭೆ ಮುಖ್ಯ ಅಧಿಕಾರಿ ಬಾಲಚಂದ್ರಪ್ಪ, ಗ್ರಾಪಂ ಅಧ್ಯಕ್ಷೆ ಸರಿತಾ ಕೃಷ್ಣಪ್ಪ, ಉಪಾಧ್ಯಕ್ಷ ಎಂ.ಬಿ. ರೇಣುಕಾ ಪ್ರಸಾದ್, ಮಾಜಿ ತಾಪಂ ಸದಸ್ಯ ಎನ್.ಜಿ. ನಾಗರಾಜ್, ಗ್ರಾಪಂ ಸದಸ್ಯರಾದ ಎಂ.ಪಿ. ರತ್ನಾಕರ್, ರಾಜಶೇಖರ್, ಲಕ್ಷ್ಮಿ ಚಂದ್ರಪ್ಪ, ಸೇರಿದಂತೆ, ವಿವಿಧ ಇಲಾಖೆಗಳ ಅಧಿಕಾರಿಗಳು ಆರಕ್ಷಕ ಇಲಾಖೆಯವರು, ಸಾರ್ವಜನಿಕರು ಉಪಸ್ಥಿತರಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post