No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಶೀಘ್ರದಲ್ಲಿಯೇ ಸಿಸಿ ಕ್ಯಾಮೆರಾ ಅಳವಡಿಕೆ: ಎಸ್‌ಪಿ ಭರವಸೆ

kalpa News by kalpa News
August 19, 2023
in ಸೊರಬ
0
ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಶೀಘ್ರದಲ್ಲಿಯೇ ಸಿಸಿ ಕ್ಯಾಮೆರಾ ಅಳವಡಿಕೆ: ಎಸ್‌ಪಿ ಭರವಸೆ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಚಂದ್ರಗುತ್ತಿ  |

ಪುರಾಣ ಹಾಗೂ ಇತಿಹಾಸ ಪ್ರಸಿದ್ಧ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಶೀಘ್ರದಲ್ಲಿಯೇ ಸಿಸಿ ಕ್ಯಾಮೆರಾ ಅಳವಡಿಕೆಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ SPMithunKumar ಹೇಳಿದರು.

ಶುಕ್ರವಾರ ಇಲ್ಲಿನ ಶ್ರೀ ರೇಣುಕಾಂಬ ಸಭಾ ಭವನದಲ್ಲಿ ಏರ್ಪಡಿಸಿದ್ದ ಜನ ಸಂಪರ್ಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಚಂದ್ರಗುತ್ತಿ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು ವಿಶೇಷ ದಿನಗಳಲ್ಲಿ ಆಗಮಿಸುವ ಹಿನ್ನೆಲೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವಂತೆ ದೇವಸ್ಥಾನ ಸಮಿತಿ ಹಾಗೂ ಸ್ಥಳೀಯ ಗ್ರಾಪಂ ಅವರಿಗೆ ಸೂಚನೆ ನೀಡಲಾಗಿದೆ. ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆಯಾಗದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳ ಮೂಲಕ ಮಾಹಿತಿ ಪಡೆದು ಕ್ರಮ ವಹಿಸಲಾಗುವುದು. ಸೊರಬ ಠಾಣೆಯ ಸಿಬ್ಬಂದಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಸಂಬಂಧಿಸಿದಂತೆ  ಸುಮಾರು 30  ಆಯಕಟ್ಟಿನ ಸ್ಥಳಗಳನ್ನು ಗುರುತಿಸಿದ್ದಾರೆ. ರಾತ್ರಿ ವೇಳೆಯಲ್ಲಿಯೂ ಸ್ಪಷ್ಟವಾಗಿ ಚಿತ್ರೀಕರಣವಾಗುವಂತೆ ಸುಮಾರು 40 ಸಿಸಿ ಕ್ಯಾಮೆರಾ ಅಳವಡಿಸುವ ಕುರಿತು ಜಿಲ್ಲಾಧಿಕಾರಿ ಅವರಿಗೆ ಮಾಹಿತಿ ನೀಡಲಾಗುವುದು. ಮುಂದಿನ ಒಂದು ತಿಂಗಳಲ್ಲಿ ಈ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

ಸಭೆಯಲ್ಲಿ ಗ್ರಾಪಂ ಉಪಾಧ್ಯಕ್ಷ ರೇಣುಕಾ ಪ್ರಸಾದ್ ಮಾತನಾಡಿ, ಚಂದ್ರಗುತ್ತಿಯ ಪೊಲೀಸ್ ಉಪಠಾಣೆಯನ್ನು ತೆರವು ಮಾಡಿ ತಿಂಗಳುಗಳು ಉರುಳಿದೆ. ಸಿಬ್ಬಂದಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಹೆಚ್ಚಿನ ಸಿಬ್ಬಂದಿ ನೇಮಕ ಮಾಡಬೇಕು. ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಮಹಿಳಾ ಸಿಬ್ಬಂದಿಯವರ ನೇಮಕವೂ ಆಗಬೇಕು ಎಂದು ಸಭೆಯ ಗಮನಕ್ಕೆ ತಂದರು.

ತಾಪಂ ಮಾಜಿ ಅಧ್ಯಕ್ಷ ಎಚ್. ಗಣಪತಿ ಮಾತನಾಡಿ, ಕ್ಷೇತ್ರದ ಶಾಸಕರೇ ಆದ ಮಧು ಬಂಗಾರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಕ್ಷೇತ್ರಕ್ಕೆ ಅಗತ್ಯವಿರುವ ಮೂಲ ಸೌಲಭ್ಯಗಳು ಮತ್ತು ಪೊಲೀಸ್ ಇಲಾಖೆಗೆ ಅನುಕೂಲವಾಗುವಂತಹ ಸೌಲಭ್ಯಗಳ ಕುರಿತು ಸಚಿವರಲ್ಲಿ ಕೇಳಲಾಗುವುದು. ಸೊರಬ ತಾಲೂಕಿನಲ್ಲಿ ಅಪರಾಧ ಕೃತ್ಯಗಳ ಸಂಖ್ಯೆ ಕಡಿಮೆ. ಆದರೆ, ಕೆಲ ಪ್ರಕರಣಗಳಲ್ಲಿ ತಪ್ಪಿತಸ್ಥರೇ ಮೊದಲು ದೂರು ದಾಖಲಿಸುವ ಸಾಧ್ಯತೆ ಇರುತ್ತದೆ. ಈ ನಿಟ್ಟಿನಲ್ಲಿ ಸಣ್ಣ ಪುಟ್ಟ ಗಲಾಟೆಗಳಾದ ಸಂದರ್ಭದಲ್ಲಿ ತತಕ್ಷಣವೇ ಕೇಸು ದಾಖಲಿಸುವ ಬದಲು, ಪ್ರಾಥಮಿಕವಾಗಿ ಮಾಹಿತಿ ಪಡೆದು ಕ್ರಮ ಕೈಗೊಂಡರೆ ನೊಂದವರಿಗೆ ನ್ಯಾಯ ಕಲ್ಪಿಸಿದಂತಾಗುತ್ತದೆ ಎಂದು ತಿಳಿಸಿದರು.

Also read: ಆ. 20ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಎಸ್ಪಿ ಮಿಥುನ್ ಕುಮಾರ್, ಕೆಲ ಬಂಧಿತ ಆರೋಪಿಗಳು ಕೆಲವೇ ದಿನಗಳಲ್ಲಿ ಜಾಮೀನಿನ ಮೇಲೆ ಹೊರ ಬರುತ್ತಾರೆ ಎನ್ನುವುದು ಜನರ ಮನಸ್ಸಿನಲ್ಲಿದೆ. ಪೊಲೀಸ್ ಇಲಾಖೆಯಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ದೋಷಾರೋಪಣ ಪಟ್ಟಿ ಸಲ್ಲಿಸಲಾಗುತ್ತದೆ. ಪ್ರಕರಣ ಯಾವ ಹಂತದಲ್ಲಿದೆ ಎನ್ನುವುದಕ್ಕಿಂತ ಆರೋಪಿತರಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗುವುದು ಮುಖ್ಯವಾಗುತ್ತದೆ. ಚಂದ್ರಗುತ್ತಿಯ ಉಪ ಪೊಲೀಸ್ ಠಾಣೆಗೆ ಹೆಚ್ಚಿನ ಸಿಬ್ಬಂದಿ ನೇಮಿಸಲಾಗುವುದು ಜೊತೆಗೆ ನಾಲ್ವರು ಗೃಹರಕ್ಷಕರನ್ನು ನೇಮಿಸುವುದಾಗಿ ತಿಳಿಸಿದರು.

ಇದಕ್ಕೂ ಮೊದಲು ಎಸ್‌ಪಿ ಜಿ.ಕೆ. ಮಿಥುನ್ ಕುಮಾರ್, ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ತೆರಳಿ ಶ್ರೀ ದೇವಿಯ ದರ್ಶನ ಪಡೆದು, ದೇವಸ್ಥಾನ ಹಾಗೂ ದೇವಸ್ಥಾನದ ಸುತ್ತ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶಿಕಾರಿಪುರ ಡಿವೈಎಸ್‌ಪಿ ಶಿವಾನಂದ ಮದರಕಂಡಿ, ಸಿಪಿಐ ಎಲ್. ರಾಜಶೇಖರ್, ಪಿಎಸ್‌ಐ ಎಚ್.ಎನ್. ನಾಗರಾಜ್, ಗ್ರಾಪಂ ಅಧ್ಯಕ್ಷೆ ಸರಿತಾ ಕೃಷ್ಣಪ್ಪ, ಶ್ರೀ ರೇಣುಕಾಂಬ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಸನ್ನ ಶೇಟ್, ದೇವಸ್ಥಾನದ ಕಾರ್ಯನಿರ್ವಹಣಾ ಅಧಿಕಾರಿ ವಿ.ಎಲ್. ಶಿವಪ್ರಸಾದ್, ಶ್ರೀ ರೇಣುಕಾಂಬ ದಸರಾ ಉತ್ಸವ ಸಮಿತಿ ಅಧ್ಯಕ್ಷ ಡಾ. ಆರ್. ಶ್ರೀಧರ್ ಹುಲ್ತಿಕೊಪ್ಪ, ಗ್ರಾಪಂ ಸದಸ್ಯ ಎಂ.ಪಿ. ರತ್ನಾಕರ, ತಾಪಂ ಮಾಜಿ ಸದಸ್ಯ ಎನ್.ಜಿ. ನಾಗರಾಜ್, ರಘು ಸ್ವಾಧಿ ಸೇರಿದಂತೆ ಇತರರಿದ್ದರು.
ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಚಂದ್ರಗುತ್ತಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆ. 20ರಂದು ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Next Post

ಅಖಿಲ ಭಾರತ ಸಸಿ ನೆಡುವ ಅಭಿಯಾನದಡಿ 4ನೇ ಕೋಟಿಯ ಸಸಿ ನೆಟ್ಟ ಅಮಿತ್ ಶಾ

kalpa News

kalpa News

Next Post
Amit Shah planted four croreth sapling under ‘All India Tree Plantation Campaign’

ಅಖಿಲ ಭಾರತ ಸಸಿ ನೆಡುವ ಅಭಿಯಾನದಡಿ 4ನೇ ಕೋಟಿಯ ಸಸಿ ನೆಟ್ಟ ಅಮಿತ್ ಶಾ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL